ಮಡಿಕೇರಿ ಜೂ.14 NEWS DESK : ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ಅಧಿನಿಯಮ ಜಾರಿಗೊಳಿಸಿದ ಹಿನ್ನಲೆಯಲ್ಲಿ ಈ ಕಾಯ್ದೆಯನ್ನು ಜಾರಿಗೊಳಿಸುವಲ್ಲಿ ಮಹತ್ತರ ಪಾತ್ರವಹಿಸಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ದೊಡ್ಡಬಳ್ಳಾಪುರ ವಕೀಲರ ಸಂಘದ ಸಂಘದಿಂದ ಸನ್ಮಾನಿಸಲಾಯಿತು.
ಎ.ಎಸ್.ಪೊನ್ನಣ್ಣ ನವರ ವಿಧಾನ ಸೌಧ ಕಚೇರಿಗೆ ಭೇಟಿ ನೀಡಿದ ಸಂಘದ ಪ್ರಮುಖರು ಹಾಗೂ ಪದಾಧಿಕಾರಿಗಳು ಶಾಸಕರನ್ನು ಸನ್ಮಾನಿಸಿ ಗೌರವಿಸಿದರು. ಇದೇ ಸಂದರ್ಭ ಕಚೇರಿ ಕಟ್ಟಡ ನಿರ್ಮಾಣಕ್ಕೆ ಮನವಿ ಸಲ್ಲಿಸಿದರು.
ಸಂಘದ ಅಧ್ಯಕ್ಷ ಎಂ.ರವಿ, ಪದಾಧಿಕಾರಿಗಳಾದ ಕೃಷ್ಣಮೂರ್ತಿ, ಮುನಿರಾಜ್, ವಿಜಯ್ ಕುಮಾರ್, ಸದಸ್ಯರಾದ ಶಿವಕುಮಾರ್,
ಮಹಮದ್ ಮಮ್ತಾಜ್, ಪ್ರಭಾಕರ್,ಸೈಯದ್ ನಾಜಿಮ್,ಪ್ರವೀಣ್ ಕುಮಾರ್,ಮೋಹನ್ ಕುಮಾರ್ ಹಾಜರಿದ್ದರು.