ಮಡಿಕೇರಿ ಜೂ.14 NEWS DESK : ರಕ್ತದಾನ ಮಹಾದಾನವಾಗಿದ್ದು, ಕೊಡಗು ವಿಶ್ವ ವಿದ್ಯಾನಿಲಯಕ್ಕೆ ಒಳಪಡುವ ಎಲ್ಲಾ ಕಾಲೇಜುಗಳಲ್ಲಿ ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗುವುದು ಎಂದು ಚಿಕ್ಕಅಳುವಾರ ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಶೋಕ ಆಲೂರ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ರಕ್ತನಿಧಿ ಕೇಂದ್ರ, ಜಿಲ್ಲಾಸ್ಪತ್ರೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಸೋಮವಾರಪೇಟೆ ತಾಲ್ಲೂಕು, ಕೊಡಗು ವಿಶ್ವ ವಿದ್ಯಾಲಯ, ಭಾರತೀಯ ರೆಡ್‌ಕ್ರಾಸ್ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಕೊಡಗು ವಿಶ್ವವಿದ್ಯಾನಿಲಯದ ಚಿಕ್ಕ ಅಳುವಾರದ ಜ್ಞಾನ ಕಾವೇರಿ ಕ್ಯಾಂಪಸ್ ನಲ್ಲಿ ಶುಕ್ರವಾರ ನಡೆದ ವಿಶ್ವ ರಕ್ತದಾನಿಗಳ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಕ್ತದಾನದಿಂದಾಗುವ ಲಾಭಗಳ ಕುರಿತು ಅರಿವು ಮೂಡಿಸಿಕೊಳ್ಳುವುದು ಮುಖ್ಯ. ಮುಂಬರುವ ದಿನಗಳಲ್ಲಿ ಕೊಡಗು ವಿಶ್ವ ವಿದ್ಯಾನಿಲಯಕ್ಕೆ ಒಳಪಟ್ಟ ಎಲ್ಲಾ ಕಾಲೇಜುಗಳಲ್ಲಿ ರಕ್ತದಾನ ಶಿಬಿರಗಳನ್ನು ಆಯೋಜಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ರಕ್ತದಾನ ದಿನಾಚರಣೆ ಕಾರ್ಯಕ್ರಮವನ್ನು ಕಳೆದ 20 ವರ್ಷಗಳಿಂದ ಆಚರಿಸಿಕೊಂಡು ಬರಲಾಗುತ್ತಿದೆ. ನಿರಂತರವಾಗಿ ರಕ್ತದಾನ ಮಾಡಿದ ರಕ್ತದಾನಿಗಳಿಗೆ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಕುಮಾರ್ ಅವರು ಜಿಲ್ಲೆಯಲ್ಲಿ ರಕ್ತದ ಅವಶ್ಯಕತೆ ಇರುವ ಬಗ್ಗೆ ವಿವರಿಸಿದರು. ಇತ್ತೀಚಿನ ದಿನಗಳಲ್ಲಿ ಡೆಂಗ್ಯೂ ಜ್ವರ ಇರುವ ಕಾರಣ ರಕ್ತ ಹಾಗೂ ಪ್ಲೇಟ್‌ಲೇಟ್‌ಗಳ ಅವಶ್ಯಕತೆ ತುಂಬಾ ಇದೆ. ಆದ್ದರಿಂದ ಎಲ್ಲರೂ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವಂತೆ ಹೇಳಿದರು. ರಕ್ತದ ಅವಶ್ಯಕತೆ ಹಾಗೂ ರಕ್ತದಾನದ ಮಹತ್ವ ಮತ್ತು ಉಪಯೋಗಗಳ ಕುರಿತು ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ಕರುಂಬಯ್ಯ ಅವರು ಅರಿವು ಮೂಡಿಸಿದರು. ಕೊಡಗು ವಿಶ್ವವಿದ್ಯಾಲಯದ ಕುಲಸಚಿವರಾದ ಡಾ.ಸೀನಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಜಿಲ್ಲೆಯಲ್ಲಿ ಯಾವುದೇ ಸಂದರ್ಭದಲ್ಲಿ ರಕ್ತದ ಕೊರತೆಯಾಗಬಾರದು. ರಕ್ತದ ಅವಶ್ಯಕತೆ ಇದ್ದಾಗ ತಾವು ಕೈಜೋಡಿಸುವುದಾಗಿ ತಿಳಿಸಿದರು. ಕುಲಸಚಿವರಾದ ಡಾ.ಸೀನಪ್ಪ ಅವರು ರಕ್ತದಾನದ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು.
ಈ ದಿನ ಅತಿ ಹೆಚ್ಚು ರಕ್ತದಾನ ಮಾಡಿ ಸನ್ಮಾನ ಸ್ವೀಕರಿಸಿದ ದಾನಿಗಳು ಶ್ರೇಷ್ಠರು. ಮುಂದಿನ ದಿನಗಳಲ್ಲಿ ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು ಅತಿ ಹೆಚ್ಚು ರಕ್ತದಾನ ಮಾಡಿ ಸನ್ಮಾನ ಸ್ವೀಕರಿಸುವಂತಾಗಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ.ಆನಂದ್, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಕೆ.ಶಾಂತಿ, ಜಿಲ್ಲಾ ಮೇಲ್ವಿಚಾರಕರಾದ ಸುನಿತಾ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಉಷಾ, ಕಮಲ, ಮುತ್ತಮ್ಮ, ಐಸಿಟಿಸಿ ಆಪ್ತ ಸಮಾಲೋಚಕರು, ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದ್ದರು. ಅತೀ ಹೆಚ್ಚು ರಕ್ತದಾನ ಮಾಡಿದ ರಕ್ತದಾನಿಗಳನ್ನು ಸನ್ಮಾನಿಸಲಾಯಿತು. ಕೊಡಗು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಉಪನ್ಯಾಸಕರು, ಸಿಬ್ಬಂದಿಗಳು ರಕ್ತದಾನ ಮಾಡಿದರು. ಎಂ.ಎ.ವಿದ್ಯಾರ್ಥಿ ಅಮೃತ್‌ರಾಜ್ ಅವರು ಪ್ರಾರ್ಥಿಸಿದರು. ಕೊಡಗು ವಿಶ್ವವಿದ್ಯಾಲಯದ ಪ್ರೊಫೆಸರ್ ಡಾ.ಜಮೀರ್ ಅಹಮದ್ ಅವರು ಸ್ವಾಗತಿಸಿದರು. ಕೊಡಗು ವಿಶ್ವವಿದ್ಯಾಲಯದ ಉಪನ್ಯಾಸಕರಾದ ಸುದರ್ಶನ್ ಕುಮಾರ್ ಅವರು ವಂದಿಸಿದರು.
Breaking News
- *ಕುಶಾಲನಗರ ಕಳವು ಪ್ರಕರಣ : ಇಬ್ಬರು ಆರೋಪಿಗಳ ಬಂಧನ*
- *ನ.17 ರಂದು ಎಲ್ಕೆಜಿಯಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗಾಗಿ ಮಡಿಕೇರಿಯಲ್ಲಿ ಚಿತ್ರಕಲಾ ಸ್ಪರ್ಧೆ*
- *ಮಿನಿ ಒಲಿಂಪಿಕ್ ಕ್ರೀಡಾಕೂಟಕ್ಕೆ ಕೊಡಗು ಮರ್ಕರ ಟೆಕ್ವಾಂಡೋ ಕ್ಲಬ್ನ ವಿದ್ಯಾರ್ಥಿಗಳು ಆಯ್ಕೆ*
- *ಅರೆಕಾಡಿನಲ್ಲಿ ಗಮನ ಸೆಳೆದ ‘ನಾಡೊರ್ಮೆ’ ಕಾರ್ಯಕ್ರಮ : ಕೊಡವ ಸಂಸ್ಕೃತಿ-ಸಾಹಿತ್ಯ ಬೆಳವಣಿಗೆಗೆ ಮತ್ತಷ್ಟು ಶ್ರಮಿಸಿ : ಶಾಸಕ ಡಾ.ಮಂತರ್ ಗೌಡ*
- *ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಯುವ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ : ವಿದ್ಯಾರ್ಥಿಗಳು ಮೌಲ್ಯಯುತ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸಿ : ಎಸ್ಪಿ ಕೆ.ರಾಮರಾಜನ್*
- *”ಜೇಡ್ಲ ಗೋಕುಲ ತಿಲಕ” ಪ್ರಶಸ್ತಿಗೆ ಅರ್ಜಿ ಆಹ್ವಾನ*
- *ಕುಶಾಲನಗರ- ಶ್ರೀರಂಗಪಟ್ಟಣ ರಸ್ತೆ ಕಾಮಗಾರಿ ಶೀಘ್ರ ಪೂರ್ಣ : ಸಂಸದ ಯದುವೀರ್ ಭರವಸೆ*
- *ಹಾಕತ್ತೂರು, ಮೇಕೇರಿಯಲ್ಲಿ ಕಾರ್ಯಕರ್ತರ ಸಭೆ ನಡೆಸಿದ ಸಂಸದ ಯದುವೀರ್*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನಾಪೋಕ್ಲು : ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ*