ಮಡಿಕೇರಿ ಜೂ.15 NEWS DESK: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕುಶಾಲನಗರ ವ್ಯಾಪ್ತಿಯ ಮುಳ್ಳುಸೋಗೆ ಶ್ರೀ ಕನ್ನಂಬಾಡಿಯಮ್ಮ ಮಾರಮ್ಮ ದೇವಾಲಯದ ಅಭಿವೃದ್ಧಿಗೆ ದೇಣಿಗೆ ನೀಡಲಾಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ 1,50,000 ಚೆಕ್ಅನ್ನು ಯೋಜನೆಯ ಜಿಲ್ಲಾ ನಿರ್ದೇಶಕರಾದ ಲೀಲಾವತಿ ದೇವಾಲಯದ ಆಡಳಿತ ಮಂಡಳಿಗೆ ವಿತರಣೆ ಮಾಡಿದರು.
ಈ ಸಂದರ್ಭ ಮಾತನಾಡಿದ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಗಣೇಶ್, ಶ್ರೀ ಕ್ಷೇತ್ರದಿಂದ ಪ್ರಸಾದ ರೂಪವಾಗಿ ಕೊಡಮಾಡಿದ ಮೊತ್ತವನ್ನು ಕೃತಜ್ಞತಾ ಪೂರಕವಾಗಿ ಸ್ವೀಕರಿಸಿದ್ದೇವೆ ಎಂದರು.
ಈ ಸಂದರ್ಭ ಸೋಮವಾರಪೇಟೆ ತಾಲೂಕು ಯೋಜನಾಧಿಕಾರಿ ರೋಹಿತ್, ವಲಯದ ಮೇಲ್ವಿಚಾರಕರಾದ ಪೂರ್ಣಿಮಾ, ಸೇವಾ ಪ್ರತಿನಿಧಿ ಕುಸುಮ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಳ್ಳುಸೋಗೆ ಒಕ್ಕೂಟದ ಅಧ್ಯಕ್ಷರಾದ ರಾಧಾ, ದೇವಸ್ಥಾನ ಆಡಳಿತ ಮಂಡಳಿಯ ನಿರ್ದೇಶಕರುಗಳು, ಸದಸ್ಯರುಗಳು ಹಾಜರಿದ್ದರು.