ಕ್ರೀಡಾಂಗಣದ ಉಸ್ತುವಾರಿ ಹುದ್ದೆ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿರುವ ಮಡಿಕೇರಿಯ ಜಿಲ್ಲಾ ಕ್ರೀಡಾಂಗಣಕ್ಕೆ ಕ್ರೀಡಾಂಗಣದ ಉಸ್ತುವಾರಿ ಹುದ್ದೆಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08272-220986 ಮತ್ತು 9480032712 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ತಿಳಿಸಿದ್ದಾರೆ.
ಮಹಿಳಾ ಕ್ಷೇಮಪಾಲಕರ ಹುದ್ದೆ : ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿರುವ ಕಿರಿಯರ ಕ್ರೀಡಾ ವಸತಿ ನಿಲಯಕ್ಕೆ ಮಹಿಳಾ ಕ್ಷೇಮಪಾಲಕರ(ಕೇರ್‍ಟೇಕರ್) ಹುದ್ದೆಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹಗಲು ಮತ್ತು ರಾತ್ರಿಯ ವೇಳೆಯಲ್ಲಿ ಕ್ಷೇಮಪಾಲಕರು ಕಿರಿಯರ ಕ್ರೀಡಾ ನಿಲಯದಲ್ಲಿಯೇ ಇರಬೇಕು. ಮಹಿಳಾ ಅಭ್ಯರ್ಥಿಯಾಗಿರಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ. 08272-220986 ಮತ್ತು 9480032712 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.