ಮಡಿಕೇರಿ ಜೂ.17 NEWS DESK : ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯಿಂದ ನಂದಿಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಉಚಿತ ನೋಟ್ ಪುಸ್ತಕ ಹಾಗೂ ಶೈಕ್ಷಣಿಕ ಸಾಮಾಗ್ರಿಗಳನ್ನು ವಿತರಿಸಲಾಯಿತು.
ದಾನಿಗಳಾದ ಚೆನ್ನಯ್ಯ ಅವರು ಕೊಡುಗೆಯಾಗಿ ನೀಡಿದ ಪುಸ್ತಕ ಹಾಗೂ ಶೈಕ್ಷಣಿಕ ಸಾಮಾಗ್ರಿಗಳನ್ನು ಶಾಲೆಯ ನೀಡಲಾಯಿತು.
ಈ ಸಂದರ್ಭ ಮಾತನಾಡಿದ ಬೆಂಗಳೂರಿನ ಕೆಂಪೇಗೌಡ ಆಸ್ಪತ್ರೆಯ ಡಾ.ಸಂಪತ್, ವಿದ್ಯಾರ್ಥಿಗಳು ತಮ್ಮ ಮನೆಯ ವಾತಾವರವನ್ನು ಸೂಚಿಯಾಗಿಡುವುದರ ಜೊತೆಗೆ ವೈಯಕ್ತಿಕ ಸ್ವಚ್ಚತೆಯನ್ನು ಕಾಪಾಡಿಕೊಳ್ಳಬೇಕು. ಆ ಮೂಲಕ ಉತ್ತಮ ಆರೋಗ್ಯವನ್ನು ಪಡೆಯಬಹುದು ಎಂದು ಸಲಹೆ ನೀಡಿದರು.
ಎಲ್ಐಸಿ ವ್ಯವಸ್ಥಾಪಕ ಹಾಗೂ ಪುಸ್ತಕ ದಾನಿ ಚೆನ್ನಯ್ಯ ಮಾತನಾಡಿ, ತಾನು ಇದೇ ಶಾಲೆಯಲ್ಲಿ ಶಿಕ್ಷಣ ಪಡೆದಿದ್ದು, ಇಲ್ಲಿಯ ವಿದ್ಯಾರ್ಥಿಗಳಿಗೆ ಹಾಗೂ ಶಾಲೆಗೆ ಸೇವೆ ಸಲ್ಲಿಸುವ ಅವಕಾಶ ದೊರೆತ್ತಿರುವುದು ನನ್ನ ಭಾಗ್ಯ ಎಂದರು. ವಿದ್ಯಾರ್ಥಿ ಸರ್ಕಾರಿ ಶಾಲೆ ಎಂಬ ಕೀಳರಿಮೆ ಹೊಂದದೆ. ಶಾಲೆಯ ಸಿಗುವ ಎಲ್ಲಾ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಉನ್ನತ ಸ್ಥಾನದಲ್ಲಿ ಗುರುತಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಇದೇ ಸಂದರ್ಭ ಪುಸ್ತಕ ದಾನಿ ಚೆನ್ನಯ್ಯ ಹಾಗೂ ಡಾ.ಸಂಪತ್ ಅವರನ್ನು ಶಾಲಾ ವತಿಯಿಂದ ಹಾಗೂ ಕರ್ನಾಟಕ ರಕ್ಷಣಾ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯ ಕರವೇ ಫ್ರಾನ್ಸಿಸ್ ಡಿಸೋಜ, ನಂದಿಗುಂದ ಶಾಲೆಯ ಮುಖ್ಯ ಶಿಕ್ಷಕರಾದ ಗಣಪತಿ, ಶಾಲಾ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.