ಮಡಿಕೇರಿ ಜೂ.17 NEWS DESK : ಕಾಡಾನೆಗಳ ಹಿಂಡು ಮನೆಯ ಅಂಗಳದಲ್ಲಿ ದಾಂಧಲೆ ನಡೆಸಿ, ಹೂ ಕುಂಡಗಳನ್ನು ಹಾನಿಗೊಳಿಸಿದ್ದಲ್ಲದೆ, ಮನೆಯ ಒಳಕ್ಕೆ ಮರಿಯಾನೆಗಳು ನುಗ್ಗಲು ಯತ್ನಿಸಿದ ಘಟನೆ ಗುಹ್ಯ ಗ್ರಾಮದಲ್ಲಿ ನಡೆದಿದೆ.
ಗುಹ್ಯ ಗ್ರಾಮದ ಮೂಕೊಂಡ ಸುಬ್ರಮಣಿ ಎಂಬವರ ಕಾಫಿ ತೋಟದಲ್ಲಿ ಮರಿಯಾನೆಗಳೂ ಸೇರಿದಂತೆ ಆರಕ್ಕೂ ಹೆಚ್ಚು ಕಾಡಾನೆಗಳು ಬಿಡುಬಿಟ್ಟು ದಾಂಧಲೆ ನಡೆಸಿವೆ. ಅಲ್ಲದೆ ಕೃಷಿ ಫಸಲುಗಳನ್ನು ನಾಶಗೊಳಿಸಿವೆ. ರಾತ್ರಿ ಮನೆಯಂಗಳಕ್ಕೆ ಬಂದ ಕಾಡಾನೆಗಳ ಹಿಂಡು ಮನೆಯ ಅಂಗಳದಲ್ಲಿದ್ದ 20ಕ್ಕೂ ಅಧಿಕ ಹೂ ಕುಂಡಗಳನ್ನು ತುಳಿದು ಧ್ವಂಸಗೊಳಿಸಿವೆ.
ಗುಹ್ಯ ಭಾಗದಲ್ಲಿ ನಿರಂತರವಾಗಿ ಕಾಡಾನೆಗಳ ಹಾವಳಿಯಿಂದಾಗಿ ರಾತ್ರಿ ಮನೆಯಲ್ಲಿ ನಿದ್ರೆ ಮಾಡಲು ಭಯವಾಗುತ್ತಿದೆ. ಸಂಜೆ ಮನೆಯಿಂದ ಹೊರ ಹೋಗದಂತಹ ಪರಿಸ್ಥಿತಿ ನಿರ್ಮಾಣವಾಗಿ ಎಂದು ಮೂಕೊಂಡ ಸುಬ್ರಮಣಿ ಆತಂಕ ವ್ಯಕ್ತಪಡಿಸಿದ್ದಾರೆ.
ಮನೆಯ ಬದಿಯಲ್ಲಿದ್ದ ಪ್ಲಾಸ್ಟಿಕ್ ಚೇರ್‍ಗಳನ್ನು ಹಾಗೂ ಇನ್ನಿತರ ವಸ್ತುಗಳನ್ನು ಎಳೆದು, ತುಳಿದು ನಾಶಗೊಳಿಸಿದ್ದು, ಮನೆಯ ಪಕ್ಕದಲ್ಲೇ ಕಾಡಾನೆಗಳು ಘೀಳಿಡುತ್ತಿದ್ದವು. ಮರಿಯಾನೆಗಳು ಮನೆಯ ಒಳಕ್ಕೆ ನುಗ್ಗಲು ಯತ್ನಿಸುತ್ತಿದ್ದವು ಎಂದರು.
ಕಾಡಾನೆಗಳ ಹಾವಳಿಯನ್ನು ತಡೆಗಟ್ಟಲು ಅರಣ್ಯ ಇಲಾಖೆಗೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಸುಬ್ರಮಣಿ, ತಕ್ಷಣವೇ ನಷ್ಟ ಪರಿಹರ ನೀಡುವಂತೆ ಒತ್ತಾಯಿಸಿದರು.
Breaking News
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬ್ಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*
- *ದೇಶ ದ್ರೋಹದ ಪ್ರಕರಣ ದಾಖಲಿಸಲು ಕೆ.ಜಿ.ಬೋಪಯ್ಯ ಆಗ್ರಹ*
- *ಬಿಜೆಪಿ, ಜೆಡಿಎಸ್ ಗೆ ಜನ ತಕ್ಕ ಪಾಠ ಕಲಿಸಿದ್ದಾರೆ : ಎಂ.ಎ.ಕಲೀಲ್ ಬಾಷ*
- *ಕೆವಿ ಎನ್ಸಿಸಿ ಕೆಡೆಟ್ ಗಳಿಂದ ಕಾಯ೯ಪ್ಪ ಪ್ರತಿಮೆ ಸ್ವಚ್ಛತೆ*
- *ಸೋಮವಾರಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ*