ಮಡಿಕೇರಿ ಜೂ.18 NEWS DESK : ರಾಜ್ಯ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡುವ ಮೂಲಕ ಜನವಿರೋಧಿ ಧೋರಣೆಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿರುವ ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಮುಕ್ಕಾಟಿರ ಅಪ್ಪಯ್ಯ ಅವರು, ತಕ್ಷಣ ಬೆಲೆ ಇಳಿಕೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಎಲ್ಲಾ ಸರಕು ಸಾಗಾಣೆ ವೆಚ್ಚ ಹೆಚ್ಚಾಗಲಿದ್ದು, ಅಗತ್ಯ ವಸ್ತುಗಳ ಬೆಲೆಯೂ ದುಬಾರಿಯಾಗಲಿದೆ. ಇದು ಜನಸಾಮಾನ್ಯರ ಮೇಲೆ ದೊಡ್ಡ ಹೊರೆಯಾಗಲಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದ್ವಿಚಕ್ರ ವಾಹನ, ಕಾರು ಮತ್ತಿತರ ವಾಹನಗಳ ಮೂಲಕ ಉದ್ಯೋಗಕ್ಕೆ ತೆರಳುವ ನೌಕರರು, ಆಟೋರಿಕ್ಷಾ, ಟ್ಯಾಕ್ಸಿ ಮಾಲೀಕ, ಚಾಲಕರಿಗೂ ಬೆಲೆ ಏರಿಕೆಯಿಂದ ಜೀವನ ಕಷ್ಟವಾಗಲಿದೆ. ಕಳೆದ 10 ವರ್ಷಗಳಲ್ಲಿ ನಿರಂತರವಾಗಿ ಎಲ್ಲಾ ವಸ್ತುಗಳ ಬೆಲೆ ಏರಿಕೆಯಾಗುತ್ತಲೇ ಇದ್ದು, ಇದೀಗ ಮತ್ತೆ ರಾಜ್ಯ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ಮಾಡಿ ಗಾಯದ ಮೇಲೆ ಬರೆ ಎಳೆದಿದೆ.
ಬಸ್ ಗಳಲ್ಲಿ ಉಚಿತ ಪ್ರಯಾಣ, ಉಚಿತ ವಿದ್ಯುತ್ ಸೇರಿದಂತೆ ಬಡವರ ಪರವಾದ ಕಾರ್ಯಕ್ರಮಗಳು ಸ್ವಾಗತಾರ್ಹ. ಆದರೆ ಇದಕ್ಕಾಗಿ ಜನಸಾಮಾನ್ಯರ ಮೇಲೆ ತೆರಿಗೆ ಹೊರೆ ಹಾಕುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.
ದೆಹಲಿಯಲ್ಲಿ ಆಮ್ ಆದ್ಮಿ ಪಾರ್ಟಿಯ ಸರಕಾರ ಬಂದಾಗಿನಿಂದ ಉಚಿತ ಬಸ್ ಪ್ರಯಾಣ, ಉಚಿತ ವಿದ್ಯುತ್, ಉತ್ತಮ ಗುಣಮಟ್ಟದ ಶಿಕ್ಷಣ ಮತ್ತು ಆರೋಗ್ಯ ಸೇವೆಯನ್ನು ಕೈಗೆಟುಕುವ ದರದಲ್ಲಿ ನೀಡಲಾಗುತ್ತಿದೆ. ಸರಕಾರಿ ಶಾಲೆಗಳ ಶಿಕ್ಷಣಕ್ಕೆ ಬಜೆಟ್‌ನಲ್ಲಿ ಅನುದಾನವನ್ನು ದ್ವಿಗುಣಗೊಳಿಸಲಾಗಿದೆ. ಇದಕ್ಕಾಗಿ ಎಲ್ಲೂ ಜನರ ಮೇಲೆ ತೆರಿಗೆ ಹೊರೆ ಹಾಕಿಲ್ಲ. ಆದರೆ ಕರ್ನಾಟಕದ ಕಾಂಗ್ರೆಸ್ ಸರಕಾರ ಬೆಲೆ ಏರಿಕೆಯ ಮೂಲಕ ಜನ ವಿರೋಧಿ ನೀತಿ ಅನುಸರಿಸುತ್ತಿದೆ.
ಗ್ಯಾರಂಟಿ ರೂಪದಲ್ಲಿ ಜನರಿಗೆ ಒಂದು ಕೈಯಿಂದ ಹಣ ನೀಡಿ, ಬೆಲೆ ಏರಿಕೆ ಮತ್ತು ತೆರಿಗೆಯ ಮೂಲಕ ಮತ್ತೊಂದು ಕೈಯಿಂದ ಕಸಿದುಕೊಳ್ಳಲಾಗುತ್ತಿದೆ. ಇದು ಖಂಡನೀಯ ಕ್ರಮವಾಗಿದೆ, ಹಣದುಬ್ಬರಕ್ಕೆ ಕಾರಣವಾಗುವ ಮತ್ತು ದೀರ್ಘಾವಧಿಯಲ್ಲಿ ಆರ್ಥಿಕತೆಯನ್ನು ಅಸ್ಥಿರಗೊಳಿಸುವ ಅತಿಯಾದ ಕೊರತೆಯ ಹಣಕಾಸು ವ್ಯವಸ್ಥೆ ಇರಬಾರದು ಎಂದು ಅಪ್ಪಯ್ಯ ಒತ್ತಾಯಿಸಿದ್ದಾರೆ.
ಇಂದಿನ ದುಬಾರಿ ಶಿಕ್ಷಣ ವ್ಯವಸ್ಥೆಯಲ್ಲಿ ಒಂದು ಕುಟುಂಬ ಇಬ್ಬರು ಮಕ್ಕಳಿಗೆ ತನ್ನ ಆದಾಯದ ಶೇ.40 ರಷ್ಟನ್ನು ಶಿಕ್ಷಣಕ್ಕಾಗಿ ಮೀಸಲಿಡಬೇಕಾಗಿದೆ. ಇದರ ನಡುವೆ ನಿರಂತರವಾಗಿ ಏರಿಕೆಯಾಗುತ್ತಿರುವ ಅಗತ್ಯ ವಸ್ತುಗಳ ಬೆಲೆಯನ್ನು ಜನಸಾಮಾನ್ಯರು ಸಹಿಸಲು ಹೇಗೆ ಸಾಧ್ಯ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Breaking News
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*