ಮಡಿಕೇರಿ ಜೂ.19 NEWS DESK : ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹನ್ ಅವರಿಗೆ “ಸ್ಪಂದನ ಸಿರಿ ಸಾಮಾಜಿಕ ಸೇವಾ ವಿಭೂಷಣ ಪ್ರಶಸ್ತಿ” ಲಭಿಸಿದೆ.
ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆಯ 13ನೇ ವಾರ್ಷಿಕೋತ್ಸವದ ಅಂಗವಾಗಿ ಹಾಸನಾಂಬ ಕಲಾಕ್ಷೇತ್ರದಲ್ಲಿ ನಡೆದ ಅಖಿಲ ಭಾರತ ಸ್ಪಂದನ ಸಿರಿ ಸಾಹಿತ್ಯ ಮತ್ತು ಸಂಸ್ಕೃತಿ ಸಮ್ಮೇಳನದಲ್ಲಿ ಪುಷ್ಪಗಿರಿ ಮಹಾ ಸಂಸ್ಥಾನ ಮಠದ ಡಾ.ಸೋಮೇಶ್ವರ ಸ್ವಾಮೀಜಿ, ಸಾಹಿತಿ ಶೈಲಜಾ, ಸ್ಪಂದನ ಸಿರಿ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕಲಾವತಿ ಮಧುಸೂದನ್ ಹಾಗೂ ಮತ್ತಿತರರು ಗಾಯತ್ರಿ ನರಸಿಂಹನ್ ಅವರ ಸಾಮಾಜಿಕ ಸೇವೆಯನ್ನು ಪರಿಗಣಿಸಿ, ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.











