
ಕುಶಾಲನಗರ ಜೂ.19 NEWS DESK : ಸರಕಾರಿ ಶಾಲೆಗಳ ಬಲವರ್ಧನೆಗೆ ಆಂಗ್ಲ ಮಾಧ್ಯಮ ಶಾಲೆಗಳ ಸಂಯೋಜನೆ ಅಗತ್ಯ ಎಂದು ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ. ಮಂಥರ್ ಗೌಡ ಇಂದಿಲ್ಲಿ ಹೇಳಿದರು. ಕುಶಾಲನಗರ ತಾಲೂಕು ಹೆಬ್ಬಾಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ವತಿಯಿಂದ ಶಾಲೆಗಾಗಿ 51, 600 ವೆಚ್ಚದಲ್ಲಿ ಅಳವಡಿಸಲಾದ ಸಿ.ಸಿ ಕ್ಯಾಮೆರಾವನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. ಮುಂದುವರಿದು ಮಾತನಾಡಿದ ಅವರು ಶೈಕ್ಷಣಿಕ ವರ್ಷದಲ್ಲಿ ಮಡಿಕೇರಿ ಕ್ಷೇತ್ರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ಮಡಿಕೇರಿ. ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಸುಂಟಿಕೊಪ್ಪ. ಮತ್ತು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಹೆಬ್ಬಾಲೆ ಸೇರಿದಂತೆ ಮೂರು ಶಾಲೆಗಳಿಗೆ ಒಂದನೇ ತರಗತಿಯಲ್ಲಿ ಆಂಗ್ಲ ಮಾಧ್ಯಮ ಶಾಲೆಯನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮತಿ ನೀಡಲಾಗಿದೆ ಎಂದರು. ನಂತರ ಜಿಲ್ಲಾ ಪಂಚಾಯತ್ ಅನುದಾನದಿಂದ 1 ಲಕ್ಷ ರೂಪಾಯಿ ವೆಚ್ಚದಲ್ಲಿ ನವೀಕರಣಗೊಂಡ ಗಂಡು ಮಕ್ಕಳ ಶೌಚಾಲಯವನ್ನು ಉದ್ಘಾಟಿಸಿ ಶಾಲಾ ಮಕ್ಕಳು ಸ್ವಚ್ಛತೆಯನ್ನು ಕಾಪಾಡಿಕೊಂಡು ಶೌಚಾಲಯವನ್ನು ಬಳಸಿಕೊಳ್ಳಬೇಕು. ಹಾಗೆ ಪರಿಸರ ದಿನದ ಅಂಗವಾಗಿ ಶಾಲಾ ಆವರಣದಲ್ಲಿ ಗಿಡಗಳನ್ನು ನೆಟ್ಟು ಮಕ್ಕಳೊಂದಿಗೆ ಸಂಭ್ರಮಿಸಿದರು. ಮುಂದಿನ ದಿನಗಳಲ್ಲಿ ಹೆಬ್ಬಾಲೆ ಶಾಲಾ ಮೈದಾನದಲ್ಲಿ ಕ್ರೀಡಾಕೂಟಗಳನ್ನು ವೀಕ್ಷಿಸಲು ಗ್ಯಾಲರಿ ನಿರ್ಮಿಸಿ ಕೊಡುವುದಾಗಿ ತಿಳಿಸಿದರು. ಅಲ್ಲದೆ ಜುಲೈ 1ರಿಂದಲೇ ಹೆಬ್ಬಾಲೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ 24/7 ವೈದ್ಯರನ್ನು ನೇಮಕ ಮಾಡುವುದಾಗಿ ತಿಳಿಸಿದರು. ಈ ಸಂದರ್ಭ ಶಾಸಕರ ಜೊತೆ ಜಿಲ್ಲಾ ಪಂಚಾಯತ್ ನ ಮಾಜಿ ಸದಸ್ಯರಾದ ವಿಪಿ ಶಶಿಧರ್. ಹೆಬ್ಬಾಲೆ ಗ್ರಾಮಸ್ಥರಾದ ಶುಂಠಿ ಶೇಖರ್ . ನಟೇಶ್ ಗೌಡ. ಎಚ್ ಟಿ ದಿನೇಶ. ಶಾಮ್. ಮಹೇಶ್. ನವೀನ. ಹೆಬ್ಬಾಲೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅರುಣ ಕುಮಾರಿ. ಸದಸ್ಯರಾದ ಪರಮೇಶ್. ಚಂದ್ರಶೇಖರ ಜೋಗಿ. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಪ್ರದೀಪ್ ಹೆಬ್ಬಾಲೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಮಂಜುನಾಥ್ ನಿವೃತ್ತ ಶಿಕ್ಷಕರಾದ ರಮೇಶ್. ಶಾಲಾ ಮುಖ್ಯ ಶಿಕ್ಷಕರಾದ ಎಚ್.ಎಮ್ ವೆಂಕಟೇಶ್. ಸಹ ಶಿಕ್ಷಕರಾದ ಜಾನಕಿ ಬಬಿತಾ. ಪುಷ್ಪಾವತಿ. ರಮ್ಯಾ ಮತ್ತು ಶಿವಾನಂದ ಅಡುಗೆಯವರಾದ ಮಿನಿತ ಮತ್ತು ಮಂಜುಳಾ ಹಾಗೂ ಗ್ರಾಮಸ್ಥರು ಎಸ್ ಡಿ ಎಂ ಸಿ ಸದಸ್ಯರು ಮತ್ತು ಶಾಲಾ ಮಕ್ಕಳು ಹಾಜರಿದ್ದರು.









