ಸುಂಟಿಕೊಪ್ಪ,ಜೂ.19 NEWS DESK : ಮಾದಾಪುರದ ಶ್ರೀಮತಿ ಡಿ.ಚೆನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಹುತಾತ್ಮ ಯೋಧರಿಗೆ ನಮನ ಕಾರ್ಯಕ್ರಮವನ್ನು ಆಚರಿಸಲಾಯಿತು.
ಇತ್ತೀಚೆಗೆ ಶ್ರೀಮತಿ ಡಿ.ಚೆನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ಆವರಣದಲ್ಲಿ ಅರಣ್ಯ ಇಲಾಖೆಯ ವತಿಯಿಂದ ಗಿಡಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಸೋಮವಾರಪೇಟೆ ವಲಯ ಅರಣ್ಯಾಧಿಕಾರಿ ಗಾನಶ್ರೀ ಹಾಗೂ ಸಹಾಯಕ ವಲಯ ಅರಣ್ಯ ಅಧಿಕಾರಿ ಜಗದೀಶ್ ರವರು ಚಾಲನೆ ನೀಡಿದರು.
ಮುಖ್ಯ ಅತಿಥಿಗಳು ವಿದ್ಯಾರ್ಥಿಗಳೊಂದಿಗೆ ಪರಿಸರದ ಮಹತ್ವವನ್ನು ಕುರಿತು ಸಂವಾದವಾದ ಮೂಲಕ ಸುತ್ತಲಿನ ಕ್ರಿಮಿಕೀಟ ಹಾಗೂ ಪ್ರಾಣಿಗಳ ಜೀವನ ಕ್ರಮ ಹಾಗೂ ಸ್ವಚ್ಛಂದ ಪರಿಸರದ ಅಗತ್ಯತೆಯನ್ನು ವಲಯ ಅರಣ್ಯಾಧಿಕಾರಿ ಗಾನಶ್ರೀ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿ ಕೊಟ್ಟರು. 2020ರ ಜೂನ್ 15ರಂದು ಭಾರತ ಚೀನಾ ಗಡಿಯಲ್ಲಿ ನಡೆದ ಸಮರದಲ್ಲಿ ಹುತಾತ್ಮರಾದ ಯೋಧರಿಗೆ ಪುಷ್ಪಾರ್ಚನೆಯ ಮೂಲಕ ಯೋಧ ನಮನವನ್ನು ಸಲ್ಲಿಸಿದರು. ಹುತಾತ್ಮ ಯೋಧರ ಕುರಿತು ಸುಂಟಿಕೊಪ್ಪ ನಾಡು ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಕುಮಾರಿ ಶ್ರೀಶ ಮಾತನಾಡಿದರು.
ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ಕರ್ನಲ್ ಬಿ.ಜಿ.ವಿಕುಮಾರ್, ಪ್ರಾಂಶುಪಾಲ ಮಂದಪ್ಪ, ಮುಖ್ಯ ಶಿಕ್ಷಕಿ ರೀಟಾ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.









