ಮಡಿಕೇರಿ ಜೂ.20 NEWS DESK : ನಗರದ ಸರ್ಕಾರಿ ವಸ್ತುಸಂಗ್ರಹಾಲಯ ಕಟ್ಟಡದ ಸಂರಕ್ಷಣೆ ಮತ್ತು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಸಂರಕ್ಷಣಾ ಕಾರ್ಯ ಕೈಗೊಂಡ ಹಿನ್ನೆಲೆಯಲ್ಲಿ 2024 ರ ಫೆಬ್ರವರಿ, 21 ರಿಂದ ವಸ್ತು ಸಂಗ್ರಹಾಲಯಕ್ಕೆ ವೀಕ್ಷಕರಿಗೆ ಮತ್ತು ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು.
ಪ್ರಸ್ತುತ ಸಂರಕ್ಷಣಾ ಕಾಮಗಾರಿ ಕಾರ್ಯಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಜೂ.16 ರಿಂದ ವೀಕ್ಷಕರಿಗೆ ಮತ್ತು ಸಾರ್ವಜನಿಕರ ಪ್ರವೇಶಕ್ಕೆ ಅನುವು ಮಾಡಲಾಗಿದೆ ಎಂದು ಸರ್ಕಾರಿ ವಸ್ತು ಸಂಗ್ರಹಾಲಯದ ಕ್ಯೂರೇಟರ್ ಬಿ.ಪಿ.ರೇಖಾ ತಿಳಿಸಿದ್ದಾರೆ.