ನಾಪೋಕ್ಲು ಜೂ.20 NEWS DESK : ಮೈಸೂರಿನಲ್ಲಿ ನಡೆದ ಗೋಜು ವಾರಿಯರ್ಸ್ ಕಪ್ ರಾಷ್ಟ್ರಮಟ್ಟದ ಮುಕ್ತ ಕರಾಟೆ ಪಂದ್ಯಾವಳಿಯಲ್ಲಿ ನಾಪೋಕ್ಲು ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.
ಹಳೆ ತಾಲೂಕಿನ ಅಂಕುರ್ ಆಂಗ್ಲ ಮಾಧ್ಯಮ ಶಾಲೆಯ ಏಳನೇ ತರಗತಿ ವಿದ್ಯಾರ್ಥಿನಿ ಸಿಂತ್ಯಾ ಕಟಾ ವಿಭಾಗದಲ್ಲಿ ತೃತೀಯ, ಬೇತು ಗ್ರಾಮದ ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಕೆ.ಪಿ.ಅಂಜನ್ ಕಟಾ ಹಾಗೂ ಕುಮಿಟೆ ವಿಭಾಗದಲ್ಲಿ ತೃತೀಯ ಹಾಗೂ ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಮೂರನೇ ತರಗತಿ ವಿದ್ಯಾರ್ಥಿ ಅದ್ವಿಕ್ ಭೀಮಯ್ಯ ಕಟಾ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.
ಇವರು ಚೆಟ್ಟಿಯಾರಂಡ ದಿಲನ್ ತಿಮ್ಮಯ್ಯ ಮತ್ತು ಧೀರಜ್ ಕಾರ್ಯಪ್ಪ ಸಹೋದರರಿಂದ ತರಬೇತಿ ಪಡೆಯುತ್ತಿದ್ದಾರೆ.
ವರದಿ : ದುಗ್ಗಳ ಸದಾನಂದ.











