ಮಡಿಕೇರಿ ಜೂ.20 NEWS DESK : ಭಾರತೀಯ ಜನತಾ ಪಾರ್ಟಿ ಸೋಮವಾರಪೇಟೆ ಮಂಡಲ ಮತ್ತು ಕುಶಾಲನಗರ ಮಹಾಶಕ್ತಿ ಕೇಂದ್ರದ ವತಿಯಿಂದ ಜೂ.21 ರಂದು 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಲಿದೆ ಎಂದು ಸೋಮವಾರಪೇಟೆ ಮಂಡಲದ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ತಿಳಿಸಿದ್ದಾರೆ.
ಕುಶಾಲನಗರದ ರೈತ ಸಹಕಾರ ಭವನದಲ್ಲಿ ಬೆಳಿಗ್ಗೆ 7.15ಕ್ಕೆ ನಡೆಯಲಿರುವ ಕಾರ್ಯಕ್ರಮವನ್ನು ಬಿಜೆಪಿಯ ಹಿರಿಯ ಮುಖಂಡ ಜಿ.ಎಲ್.ನಾಗರಾಜ್ ಉದ್ಘಾಟಿಸಲಿದ್ದಾರೆ. ಯೋಗ ಶಿಕ್ಷಕ ಶಿವರಾಂ ಯೋಗ ತರಬೇತಿ ನೀಡಲಿದ್ದಾರೆ. ಆಸಕ್ತರು ಯೋಗ ಮ್ಯಾಟ್ ತರುವಂತೆ ಅವರು ಮನವಿ ಮಾಡಿದ್ದಾರೆ.










