ಮಡಿಕೇರಿ ಜೂ.20 NEWS DESK : ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಮೈಸೂರು ಹಾಗೂ ಮೈಸೂರು-ಮಂಡ್ಯ ಮತ್ತು ಕೊಡಗು ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟ ಸಂಯುಕ್ತಾಶ್ರಯದಲ್ಲಿ ಜೂ.22 ರಂದು ಕೊಡಗು ಜಿಲ್ಲಾ ಸೌಹಾರ್ದ ಸಹಕಾರಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು ಮತ್ತು ಮುಖ್ಯಕಾರ್ಯನಿರ್ವಾಹಕರುಗಳಿಗೆ ವಿಷಯಾಧಾರಿತ ತರಬೇತಿ ಕಾರ್ಯಕ್ರಮ ನಡೆಯಲಿದೆ.
ಅಂದು ಬೆಳಿಗ್ಗೆ 10.30 ಗಂಟೆಗೆ ಮಡಿಕೇರಿಯ ಹೋಟೆಲ್ ದಿ ಫೋರ್ಟ್ ಮರ್ಕರಾ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಅಧ್ಯಕ್ಷ ಜಿ ನಂಜನಗೌಡ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಮಾಜಿ ನಿರ್ದೇಶಕ ಎಸ್.ಕೆ.ಮಂಜುನಾಥ್ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಮಾಜಿ ನಿರ್ದೇಶಕ ಹಾಗೂ ಪೊನ್ನಂಪೇಟೆ ಇಗ್ಗುತ್ತಪ್ಪ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ನಿರ್ದೇಶಕ ಎಂ.ಕೆ.ಸೋಮಯ್ಯ, ಮೈಸೂರು, ಮಂಡ್ಯ ಮತ್ತು ಕೊಡಗು ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟದ ಅಧ್ಯಕ್ಷ ಎಸ್.ಆರ್. ನಾರಾಯಣ ರಾವ್, ಸಹಕಾರ ಸಂಘಗಳ ನಿವೃತ್ತ ಹಿರಿಯ ಲೆಕ್ಕಪರಿಶೋಧಕ ಸಿರಿಲ್ ಮೊರಾಸ್ ಪಾಲ್ಗೊಳ್ಳಲಿದ್ದಾರೆ.










