ಮಡಿಕೇರಿ ಜೂ.20 NEWS DESK : ಹಳೆಯ ಕಟ್ಟಡವೊಂದು ಇದ್ದಕ್ಕಿದ್ದಂತೆ ಕುಸಿದು ಬಿದ್ದ ಪರಿಣಾಮ ಹಲವರು ಗಾಯಗೊಂಡಿರುವ ಘಟನೆ ಕೊಡಗು ಜಿಲ್ಲೆಯ ಗೋಣಿಕೊಪ್ಪ ಪಟ್ಟಣದಲ್ಲಿ ನಡೆದಿದೆ. ಇಂದು ಮಧ್ಯಾಹ್ನ ಕಟ್ಟಡ ನೆಲಸಮಗೊಂಡಿದ್ದು, ಅಗ್ನಿಶಾಮಕ ದಳ ಮತ್ತು ಎನ್‍ಡಿಆರ್‍ಎಫ್ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ 7 ಮಂದಿಯನ್ನು ರಕ್ಷಿಸಿದ್ದಾರೆ. ಆರು ಮಂದಿ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದು, ತೀವ್ರವಾಗಿ ಗಾಯಗೊಂಡಿರುವ ಒಬ್ಬರನ್ನು ಮೈಸೂರು ಆಸ್ಪತೆಗೆ ಸ್ಥಳಾಂತರಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಗೋಣಿಕೊಪ್ಪ ಪೊಲೀಸ್ ಠಾಣೆಯ ಅಧಿಕಾರಿಗಳು, ಗ್ರಾ.ಪಂ ಪ್ರತಿನಿಧಿಗಳು, ಅಧಿಕಾರಿಗಳು, ಎನ್‍ಡಿಆರ್‍ಎಫ್ ಅಧಿಕಾರಿಗಳು ಕಾರ್ಯಾಚರಣೆಗೆ ಸಹಕಾರ ನೀಡಿದರು. ಕಟ್ಟಡದಲ್ಲಿದ್ದ ಮಳಿಗೆಗಳಲ್ಲಿ ಬಿರಿಯಾನಿ ಸೆಂಟರ್ ಮತ್ತು ಮಟನ್ ಸ್ಟಾಲ್ ಕಾರ್ಯನಿರ್ವಹಿಸುತ್ತಿತ್ತು. ಅದೃಷ್ಟವಶಾತ್ ಮಳಿಗೆಗಳಲ್ಲಿ ಇದ್ದವರು ಅಪಾಯದಿಂದ ಪಾರಾಗಿದ್ದಾರೆ.












