ಮಡಿಕೇರಿ ಜೂ.20 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ವತಿಯಿಂದ ಅಂತರಾಷ್ಟ್ರೀಯ 10ನೇ ಯೋಗ ದಿನಾಚರಣೆಯು ಜೂನ್, 21 ರಂದು ಬೆಳಗ್ಗೆ 6.30 ಗಂಟೆಗೆ ನಗರದ ಕೆಳಗಿನ ಗೌಡ ಸಮಾಜದಲ್ಲಿ ನಡೆಯಲಿದೆ.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಬೋಸರಾಜು ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕರಾದ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರು ಮತ್ತು ಶಾಸಕರಾದ ಎ.ಎಸ್.ಪೊನ್ನಣ್ಣ, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಬೋಜೇಗೌಡ, ಡಾ.ಧನಂಜಯ ಸರ್ಜಿ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಜಿ.ಪಂ.ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಸಿ.ರೇಣುಕಾದೇವಿ ಇತರರು ಪಾಲ್ಗೊಳ್ಳಲಿದ್ದಾರೆ.










