ಮಡಿಕೇರಿ ಜೂ.20 NEWS DESK : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ವಿವಿಧ ಇಲಾಖೆಗಳ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಎಸ್‍ಸಿಎಸ್‍ಪಿ ಮತ್ತು ಟಿಎಸ್‍ಪಿ ಕಾರ್ಯಕ್ರಮಗಳ ಯೋಜನೆ ಸಂಬಂಧಿಸಿದಂತೆ ಮಾಹಿತಿ ಪಡೆದು ಅವರು ಮಾತನಾಡಿದರು.
ಕಳೆದ ಬಾರಿ ವಿವಿಧ ಇಲಾಖೆಯ ಕಾರ್ಯಕ್ರಮಗಳ ಪ್ರಗತಿ ಸಂಬಂಧಿಸಿದಂತೆ ಮಾಹಿತಿ ಪಡೆದ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಕಳೆದ ವರ್ಷ ಶೇಕಡಾವಾರು ಪ್ರಗತಿ ಸಾಧಿಸಲಾಗಿದ್ದು, ಈ ಬಾರಿಯೂ ಸಹ ಆರಂಭದಿಂದಲೇ ಕಾರ್ಯಕ್ರಮಗಳನ್ನು ಅರ್ಹರಿಗೆ ತಲುಪಿಸುವಂತೆ ಸೂಚನೆ ನೀಡಿದರು.
ಸರ್ಕಾರ ನಿಗದಿ ಮಾಡಿರುವ ಗುರಿಯನ್ನು ತಲುಪಬೇಕು. ಎಸ್‍ಸಿಎಸ್‍ಪಿ ಮತ್ತು ಟಿಎಸ್‍ಪಿ ಕಾರ್ಯಕ್ರಮಗಳನ್ನು ಆದ್ಯತೆ ಮೇಲೆ ಪ್ರಗತಿ ಸಾಧಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿ.ಪಂ.ಉಪ ಕಾರ್ಯದರ್ಶಿ ಎಸ್.ಧನರಾಜ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್, ಸಮಗ್ರ ಗಿರಿಜನ ಯೋಜನಾಧಿಕಾರಿ ಎಸ್.ಹೊನ್ನೇಗೌಡ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಸೋಮಸುಂದರ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ವಿಶಾಲ್ ಕುಮಾರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರಾದ ಎಂ.ಚಂದ್ರಕಾಂತ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಪುಟ್ಟರಾಜು, ಅರಣ್ಯ ಇಲಾಖೆಯ ಭಾಷಾ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಸಪ್ಪ, ಪೌರಾಯುಕ್ತರಾದ ವಿಜಯ್, ಮುಖ್ಯಾಧಿಕಾರಿಗಳಾದ ಚಂದ್ರಕುಮಾರ್, ಕೃಷ್ಣಪ್ರಸಾದ್, ನಾಚಪ್ಪ, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ಲಿಂಗರಾಜು ದೊಡ್ಡಮನಿ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಮುತ್ತಪ್ಪ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ವಿಕಲಚೇತನರ ಅಧಿಕಾರಿ ವಿಮಲ, ಕೌಶಲ್ಯಾಭಿವೃದ್ಧಿ ಇಲಾಖೆಯ ಅಧಿಕಾರಿ ರೇಖಾ, ಪ್ರವಾಸೋದ್ಯಮ ಇಲಾಖೆಯ ಜತಿನ್ ಇತರರು ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು.