ಮಡಿಕೇರಿ ಜೂ.20 NEWS DESK : ಹಳೆಯ ಕಟ್ಟಡವೊಂದು ಇದ್ದಕ್ಕಿದ್ದಂತೆ ಕುಸಿದು ಬಿದ್ದ ಪರಿಣಾಮ ಒಬ್ಬರು ತೀವ್ರವಾಗಿ ಗಾಯಗೊಂಡು ಅದೃಷ್ಟವಶಾತ್ ಐವರು ಅಪಾಯದಿಂದ ಪಾರಾದ ಘಟನೆ ಕೊಡಗು ಜಿಲ್ಲೆಯ ಗೋಣಿಕೊಪ್ಪ ಪಟ್ಟಣದಲ್ಲಿ ನಡೆದಿದೆ.
ಇಂದು ಮಧ್ಯಾಹ್ನ 2 ಗಂಟೆ ವೇಳೆಗೆ ಮುಖ್ಯ ರಸ್ತೆಯಲ್ಲಿದ್ದ ಕಟ್ಟಡ ನೆಲಸಮಗೊಂಡಿದ್ದು, ಐವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದು, ತೀವ್ರವಾಗಿ ಗಾಯಗೊಂಡಿರುವ ದೇವರಪುರ ಗ್ರಾಮದ ಮಧು ಪಿ.ಕೆ ಎಂಬುವವರನ್ನು ಆಸ್ಪತೆಗೆ ದಾಖಲಿಸಲಾಗಿದೆ.
ಸುಮಾರು 72 ವರ್ಷಗಳಷ್ಟು ಹಳೆಯದಾದ ಈ ಕಟ್ಟಡದಲ್ಲಿ ಅಂಬೂರ್ ದಮ್ ಬಿರಿಯಾನಿ ಹೊಟೇಲ್ ಮತ್ತು ಮಟನ್ ಅಂಗಡಿ ಕಾರ್ಯ ನಿರ್ವಹಿಸುತ್ತಿತ್ತು. ಕಟ್ಟಡ ಕುಸಿಯುವಾಗ ಉಂಟಾದ ಶಬ್ಧಕ್ಕೆ ಹೊಟೇಲ್ ನಡೆಸುತ್ತಿದ್ದ ತಿರುಮುರುಗನ್, ಅವರ ಕುಟುಂಬದವರು ಹಾಗೂ ಗ್ರಾಹಕರು ಹೊರಗೆ ಓಡಿ ಬಂದಿದ್ದಾರೆ. ಗ್ರಾಹಕರೊಬ್ಬರು ಸಿಕ್ಕಿ ಹಾಕಿಕೊಂಡಿರುವುದಾಗಿ ಮಾಹಿತಿ ಇದ್ದ ಹಿನ್ನೆಲೆ ಗೋಣಿಕೊಪ್ಪ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಗ್ರಾಹಕ ಮಧು ಪಿ.ಕೆ ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದರು.
ತಿರುಮುರುಗನ್ (60), ಪತ್ನಿ ಅಲಮೇಲು (46), ಪುತ್ರ ನಾರಾಯಣ (24), ಸಪ್ಲೆಯರ್ ಮಹಾಲಿಂಗಂ (25) ಹಾಗೂ ಗ್ರಾಹಕ ನಾಗರಹೊಳೆ ಹಾಡಿಯ ತಿಮ್ಮ (45) ಪ್ರಾಣಾಪಾಯದಿಂದ ಪಾರಾದವರಾಗಿದ್ದಾರೆ. ಸಮೀರ್ ಎಂಬುವವರು ನಡೆಸುತ್ತಿದ್ದ ಮಾಂಸದAಗಡಿಯಲ್ಲಿದ್ದ ಇಬ್ಬರು ಕೂಡ ಜೀವ ಉಳಿಸಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಮಡಿಕೇರಿಯಿಂದ ಎನ್.ಡಿ.ಆರ್.ಎಫ್ ರಕ್ಷಣಾ ತಂಡ ಭೇಟಿ ನೀಡಿ ಹೆಚ್ಚಿನ ಕಾರ್ಯಾಚರಣೆ ನಡೆಸಿ ಕಟ್ಟಡದ ಅವಶೇಷಗಳಡಿ ಪರಿಶೀಲನೆ ನಡೆಸಿ ಯಾವುದೇ ಜೀವಹಾನಿ ಸಂಭವಿಸಿರುವುದಿಲ್ಲ ಎಂದು ಖಾತ್ರಿ ಪಡಿಸಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಗೋಣಿಕೊಪ್ಪ ಪೊಲೀಸ್ ಠಾಣೆಯ ಅಧಿಕಾರಿಗಳು, ಗ್ರಾ.ಪಂ ಪ್ರತಿನಿಧಿಗಳು, ಅಧಿಕಾರಿಗಳು, ಎನ್‌ಡಿಆರ್‌ಎಫ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
Breaking News
- *ಜ.5 ರಂದು ಪತ್ರಕರ್ತರ ಕ್ರಿಕೆಟ್ ಕಲರವ : ಆಟಗಾರರ ಪಟ್ಟಿ ಬಿಡುಗಡೆ*
- *ಮಡಿಕೇರಿಯ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯಲ್ಲಿ ಸಂವಿಧಾನ ದಿನಾಚರಣೆ : ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ನೀಡಿ : ಸಿವಿಲ್ ನ್ಯಾಯಾಧೀಶೆ ಶುಭ*
- *ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ಗುರುತಿನ ಚೀಟಿ ವಿತರಣೆ : ಜನಸಾಮಾನ್ಯರಿಗೆ ಕಾನೂನು ಅರಿವು ಮತ್ತು ನೆರವು ಕಲ್ಪಿಸಿ : ನ್ಯಾಯಾಧೀಶ ಹೊಸಮನಿ ಪುಂಡಲೀಕ ಸಲಹೆ*
- *ಬಸವನಹಳ್ಳಿ ವಸತಿ ಶಾಲೆಯಲ್ಲಿ ನಾಟಕ ಶಿಬಿರ*
- *ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ*
- *ಚಿರತೆ ಸೆರೆಗೆ ಸೂಚನೆ*
- *ಕರಿಕೆ- ಭಾಗಮಂಡಲ ಹೆದ್ದಾರಿ ಕಾಮಗಾರಿಗೆ ಚಾಲನೆ : ಮೂಲಭೂತ ಸೌಲಭ್ಯ ಒದಗಿಸುವ ಭರವಸೆ ನೀಡಿದ ಶಾಸಕ ಪೊನ್ನಣ್ಣ*
- *ಮೂರ್ನಾಡಿನಲ್ಲಿ 69ನೇ ಕನ್ನಡ ರಾಜ್ಯೋತ್ಸವ ಸಂಭ್ರಮ*
- *ಪ್ರಧಾನಿಯನ್ನು ಭೇಟಿಯಾದ ಸಿಎಂ, ಡಿಸಿಎಂ : ವಿವಿಧ ಬೇಡಿಕೆಗಳ ಮನವಿ ಸಲ್ಲಿಕೆ*
- *ಅಭಿವೃದ್ದಿಯಲ್ಲಿ ರಾಜಕಾರಣ ಮಾಡಲಾರೆ : ಶಾಸಕ ಎ.ಎಸ್.ಪೊನ್ನಣ್ಣ*