ಬೆಂಗಳೂರು ಜೂ.20 NEWS DESK : ಕೊಡಗು ಮಾನವ ವನ್ಯಪ್ರಾಣಿ ಸಂಘರ್ಷ ಉಪಶಮನ ಪ್ರತಿಷ್ಠಾನ ನಿಧಿಯ ಮಂಡಳಿಯ 6 ನೇ ಸಭೆಯು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಸಭೆಯಲ್ಲಿ ಮುಖ್ಯಮಂತ್ರಿ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ ಎಸ್ ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಹಾಗೂ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳು ಹಾಜರಿದ್ದು, ಹಲವು ವಿಚಾರಗಳ ಬಗ್ಗೆ ಚರ್ಚಿಸಿದರು. ನಾಗರಹೊಳೆ, ಬಂಡೀಪುರ, ಬಿ.ಆರ್.ಟಿ. ಸೇರಿದಂತೆ ರಾಜ್ಯದ ಅರಣ್ಯ ಪ್ರದೇಶದಲ್ಲಿ ವ್ಯಾಪಕವಾಗಿ ಹಬ್ಬುತ್ತಿರುವ ಲಾಂಟನಾ, ಸನ್ನಾ ಮತ್ತು ಇತರ ಕಳೆಯನ್ನು ತ್ವರಿತವಾಗಿ ತೆರವುಗೊಳಿಸಲು ಕ್ರಮ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ನಡೆದ ಹುಲಿ ಸಂರಕ್ಷಣಾ ಪ್ರತಿಷ್ಠಾನದ 15ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹುಲಿ ಪ್ರತಿಷ್ಠಾನದ ಮೂಲ ಉದ್ದೇಶ ಹುಲಿ ಮತ್ತು ಹುಲಿ ಕಾಡಿನ ವೈವಿಧ್ಯಮಯ ವನ್ಯಜೀವಿಗಳು ಮತ್ತು ಪ್ರಾಣಿಗಳ ವಾಸಸ್ಥಾನದ ಸಂರಕ್ಷಣೆಯಾಗಿದ್ದು ಈ ನಿಟ್ಟಿನಲ್ಲಿ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯೋನ್ಮುಖರಾಗಬೇಕು ಎಂದರು. :: ಇಡಿಸಿ ಚಟುವಟಿಕೆಗೆ ಒತ್ತು ನೀಡಲು ಸೂಚನೆ :: ಹುಲಿ ಸಂರಕ್ಷಣಾ ಪ್ರತಿಷ್ಠಾನದ ನಿಧಿಯಿಂದ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿರುವ ಆದಿವಾಸಿಗಳ ಕ್ಷೇಮಾಭಿವೃದ್ಧಿಗೆ ಹಣ ವಿನಿಯೋಗಿಸಲು ಅವಕಾಶವಿದ್ದು, ಪರಿಸರ ಅಭಿವೃದ್ಧಿ ಸಮಿತಿಗಳ ವಿವಿಧ ಚಟುವಟಿಕೆಗಳ ಮೂಲಕ ಅರಣ್ಯದೊಳಗಿನ ಆದಿವಾಸಿಗಳ ಸಬಲೀಕರಣಕ್ಕೆ ಶ್ರಮಿಸುವಂತೆ ತಿಳಿಸಿದರು. ಕಾಳಿ, ಬಿಆರ್.ಟಿ., ನಾಗರಹೊಳೆ, ಭದ್ರಾ ಹುಲಿ ಅಭಯಾರಣ್ಯಗಳ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗಿರುವ ಇಡಿಸಿ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು, ಇನ್ನೂ ಹೆಚ್ಚಿನ ಕಾರ್ಯಕ್ರಮ ರೂಪಿಸಿ, ಮಹಿಳೆಯರಿಗೆ ಸ್ವಾವಲಂಬಿಗಳಾಗಿ ಬದುಕಲು ನೆರವು ಒದಗಿಸುವಂತೆ, ಶಾಲೆಗಳಲ್ಲಿ ಸ್ಮಾರ್ಟ್ ತರಗತಿ ಆರಂಭಿಸಲು ಮತ್ತು ಪ್ರತಿಭಾವಂತ ಆದಿವಾಸಿ ಮಕ್ಕಳಿಗೆ ಲ್ಯಾಪ್ ಟಾಪ್ ನೀಡಲು ಸೂಚನೆ ನೀಡಿದರು. :: ಕಳ್ಳಬೇಟೆ ನಿಗ್ರಹ ಶಿಬಿರದ ಸಿಬ್ಬಂದಿ ಆಹಾರಕ್ಕೆ ಹೆಚ್ಚಿನ ಅನುದಾನ :: ಹುಲಿ ಸಂರಕ್ಷಿತ ಪ್ರದೇಶಗಳ ವ್ಯಾಪ್ತಿಯಲ್ಲಿರುವ ಕಳ್ಳಬೇಟೆ ನಿಗ್ರಹ ಶಿಬಿರಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ದಿನವೊಂದಕ್ಕೆ ನೀಡಲಾಗುವ ಆಹಾರದ ಧಾನ್ಯದ ಭತ್ಯೆಯನ್ನು ಪ್ರಸ್ತುತ 80 ರೂಪಾಯಿಗಲಿಂದ 100 ರೂ.ಗೆ ಹೆಚ್ಚಿಸಲಾಗಿದ್ದು, ಇದನ್ನು ಇನ್ನೂ ಹೆಚ್ಚಿಗೆ ಮಾಡಲು ಸಾಧ್ಯವೆ ಎಂಬ ಬಗ್ಗೆ ಪ್ರಸ್ತಾವನೆ ಮಂಡಿಸಲು ಸೂಚಿಸಿದರು. :: ಭದ್ರಾ ಹುಲಿ ಯೋಜನೆಗೆ 25 ವರ್ಷ :: ಭದ್ರಾ ಅರಣ್ಯವನ್ನು ಹುಲಿ ಸಂರಕ್ಷಿತ ಪ್ರದೇಶ ಎಂದು ಘೋಷಿಸಿ 25 ವರ್ಷ ಆಗಿದ್ದು, ರಜತ ಮಹೋತ್ಸವ ಆಚರಣೆಗೆ ಸಭೆಯಲ್ಲಿ ಅನುಮತಿ ನೀಡಲಾಯಿತು. ಬಿಳಿಗಿರಿ ರಂಗನಾಥ ದೇವಸ್ಥಾನ (ಬಿ.ಆರ್.ಟಿ.)ಯಲ್ಲಿ ಪಾರಂಪರಿಕ ಕಟ್ಟವಿದ್ದು, ಇದನ್ನು ಸಿಬ್ಬಂದಿಯ ವಸತಿಗೃಹವಾಗಿ ಬಳಕೆ ಮಾಡಲಾಗುತ್ತಿದೆ. ಇದು ಶಿಥಿಲಾವಸ್ಥೆಯಲ್ಲಿದ್ದು, ಮೂಲ ಸ್ವರೂಪಕ್ಕೆ ಚ್ಯುತಿ ಆಗದಂತೆ ಇದರ ದುರಸ್ತಿಗೆ ಸಹ ಇಂದಿನ ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು.
Breaking News
- *ಜ.5 ರಂದು ಪತ್ರಕರ್ತರ ಕ್ರಿಕೆಟ್ ಕಲರವ : ಆಟಗಾರರ ಪಟ್ಟಿ ಬಿಡುಗಡೆ*
- *ಮಡಿಕೇರಿಯ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯಲ್ಲಿ ಸಂವಿಧಾನ ದಿನಾಚರಣೆ : ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ನೀಡಿ : ಸಿವಿಲ್ ನ್ಯಾಯಾಧೀಶೆ ಶುಭ*
- *ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ಗುರುತಿನ ಚೀಟಿ ವಿತರಣೆ : ಜನಸಾಮಾನ್ಯರಿಗೆ ಕಾನೂನು ಅರಿವು ಮತ್ತು ನೆರವು ಕಲ್ಪಿಸಿ : ನ್ಯಾಯಾಧೀಶ ಹೊಸಮನಿ ಪುಂಡಲೀಕ ಸಲಹೆ*
- *ಬಸವನಹಳ್ಳಿ ವಸತಿ ಶಾಲೆಯಲ್ಲಿ ನಾಟಕ ಶಿಬಿರ*
- *ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ*
- *ಚಿರತೆ ಸೆರೆಗೆ ಸೂಚನೆ*
- *ಕರಿಕೆ- ಭಾಗಮಂಡಲ ಹೆದ್ದಾರಿ ಕಾಮಗಾರಿಗೆ ಚಾಲನೆ : ಮೂಲಭೂತ ಸೌಲಭ್ಯ ಒದಗಿಸುವ ಭರವಸೆ ನೀಡಿದ ಶಾಸಕ ಪೊನ್ನಣ್ಣ*
- *ಮೂರ್ನಾಡಿನಲ್ಲಿ 69ನೇ ಕನ್ನಡ ರಾಜ್ಯೋತ್ಸವ ಸಂಭ್ರಮ*
- *ಪ್ರಧಾನಿಯನ್ನು ಭೇಟಿಯಾದ ಸಿಎಂ, ಡಿಸಿಎಂ : ವಿವಿಧ ಬೇಡಿಕೆಗಳ ಮನವಿ ಸಲ್ಲಿಕೆ*
- *ಅಭಿವೃದ್ದಿಯಲ್ಲಿ ರಾಜಕಾರಣ ಮಾಡಲಾರೆ : ಶಾಸಕ ಎ.ಎಸ್.ಪೊನ್ನಣ್ಣ*