ಮಡಿಕೇರಿ ಜೂ.20 NEWS DESK : ನಾಗರಹೊಳೆ ಪ್ರವಾಸಿಗರ ಅನುಕೂಲಕ್ಕಾಗಿ ವಿಶೇಷವಾಗಿ ವಿನ್ಯಾಸಗೊಳಿಸಲಾಗಿರುವ ಮೂರು ಮಿನಿ ಬಸ್ ಗಳಿಗೆ ಇಂದು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ವಿರಾಜಪೇಟೆಯ ಶಾಸಕ ಎ.ಎಸ್.ಪೊನ್ನಣ್ಣ ಅವರು ಹಸಿರು ನಿಶಾನೆ ತೋರಿದರು. ವಿಧಾನಸೌಧದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕರುಗಳಾದ ಜಿ.ಡಿ.ಹರೀಶ್ ಗೌಡ, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.











