ಮಡಿಕೇರಿ ಜೂ.21 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ವತಿಯಿಂದ ಅಂತರಾಷ್ಟ್ರೀಯ 10ನೇ ಯೋಗ ದಿನಾಚರಣೆಯು ಅರ್ಥಪೂರ್ಣವಾಗಿ ಜರುಗಿತು.
ನಗರದ ಕೆಳಗಿನ ಗೌಡ ಸಮಾಜದಲ್ಲಿ ಯೋಗಾಭಿಮಾನಿಗಳು ಭಾಗವಹಿಸಿ ಯೋಗ, ಧ್ಯಾನ ಮಾಡಿ ಗಮನ ಸೆಳೆದರು.
ಸೂರ್ಯ ನಮಸ್ಕಾರ, ವೃಕ್ಷಾಸನ, ಪಾದಹಸ್ತಾಸನ, ಉದ್ರ್ವಾಸನ, ತಾಡಾಸನ, ಅರ್ಧ ಮತ್ಸೇಂದ್ರಾಸನ, ಭುಜಂಗಾಸನ, ಪವನಮುಕ್ತಾಸನ, ಭದ್ರಾಸನ, ತ್ರಿಕೋನಾಸನ, ಉಷ್ಟ್ರಾಸನ, ವಜ್ರಾಸನ, ಶಲಭಾಸನ, ಶಶಾಂಕಾಸನ, ಮಂಡೂಕಾಸನ, ವಕ್ರಾಸನ, ಮಕರಾಸನ, ಸೇತುಬಂಧಾಸನ, ಉತ್ಥಾನ ಪಾದಾಸನ, ಅರ್ಧಹಲಾಸನ, ಶವಾಸನ, ಕಪಾಲಭಾತಿ, ಶೀತಲಿ ಪ್ರಾಣಾಯಾಮ, ಭ್ರಾಮರಿ ಪ್ರಾಣಾಯಾಮ, ಧ್ಯಾನ, ನಾಡಿಶೋಧ ಪ್ರಾಣಾಯಾಮ ಹೀಗೆ ಹಲವು ರೀತಿಯ ಯೋಗ ಮಾಡಲಾಯಿತು.
ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಸಿ.ರೇಣುಕಾದೇವಿ, ಯೋಗ ಗುರು ರಮೇಶ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.