ಮಡಿಕೇರಿ ಜೂ.21 NEWS DESK : ಕೊಡಗು ಗೌಡ ನಿವೃತ್ತ ನೌಕರರ ಸಂಘದ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ಸಾರ್ವಜನಿಕರಿಗಾಗಿ ನಡೆದ ಕಣ್ಣು ತಪಾಸಣಾ ಶಿಬಿರದಲ್ಲಿ ಅವಶ್ಯವಿದ್ದವರಿಗೆ ಉಚಿತ ಕನ್ನಡಕವನ್ನು ವಿತರಿಸಲಾಯಿತು.
ಕುಶಾಲನಗರದ ಸರಕಾರಿ ಪಾಲಿಟೆಕ್ನಿಕ್ ಕಾಲೇಜ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜ್ ನ ಪ್ರಬಾರ ಪ್ರಂಶುಪಾಲ ಪಿ.ಪರ್ವತರಾಜನ್ ಅವರು ಕನ್ನಡವನ್ನು ವಿತರಿಸಿ ಮಾತನಾಡಿದರು.
ಇದೊಂದು ಸಾಮಾಜಿಕ ಕಳಕಳಿಯ ಉತ್ತಮ ಕಾರ್ಯಕ್ರಮವಾಗಿದ್ದು, ಗ್ರಾಮೀಣ ಭಾಗದ ಜನರಿಗೆ ಇದು ಹೆಚ್ಚು ಪ್ರಯೋಜನವಾಗಲಿದೆ. ಇನ್ನು ಮುಂದೆಯೂ ಸಂಘ ಇಂತಹ ಪ್ರಯೋಜನಕಾರಿ ಕಾರ್ಯಕ್ರಮಗಳನ್ನು ಹೆಚ್ಚು ಹೆಚ್ಚು ಆಯೋಜಿಸಲಿ ಎಂದು ಸಲಹೆ ನೀಡಿದರು.
ಕಾಲೇಜ್ ನ ರಿಜಿಸ್ಟ್ರಾರ್ ಕೆ.ಎ.ಮೇರಿ ಮಾತನಾಡಿ ಈ ಇಳಿ ವಯಸ್ಸಿನಲ್ಲೂ ಸಂಘದ ಪದಾಧಿಕಾರಿಗಳು ಕೈಗೊಂಡಿರುವ ಜನಪರ ಕಾರ್ಯಕ್ರಮ ಅತ್ಯುತ್ತಮವಾಗಿದೆ. ಈ ರೀತಿಯ ಕಾರ್ಯಕ್ರಮಗಳನ್ನು ನಡೆಸುವುದರಿಂದ ಬಡ ಜನರ ಆಶೋತ್ತರಗಳಿಗೆ ಸಹಾಯ ಮಾಡಿದಂತಾಗುತ್ತದೆ ಎಂದು ತಿಳಿಸಿದರು.
ಸಂಘದ ಅಧ್ಯಕ್ಷ ಕೋರನ ವಿಶ್ವನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಕುದುಪಜೆ ಬೋಜಪ್ಪ, ಕಾರ್ಯದರ್ಶಿ ಬಾರಿಕೆ ಅಯ್ಯಪ್ಪ, ಸಹ ಕಾರ್ಯದರ್ಶಿ ಅತ್ತೆಡಿ ಕೃಷ್ಣಪ್ಪ, ನಿರ್ದೇಶಕರುಗಳಾದ ಬೈತಡ್ಕ ಬೆಳ್ಯಪ್ಪ, ತಳೂರು ಕಾಳಪ್ಪ, ಹೊಸೊಕ್ಲು ಪೊನ್ನಪ್ಪ, ಕುಲ್ಲಚೆಟ್ಟಿ ಪೂವಯ್ಯ ಮತ್ತಿತರ ಪ್ರಮುಖರು ಭಾಗವಹಿಸಿದ್ದರು.