ಮಡಿಕೇರಿ ಜೂ.21 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಹಾಗೂ ಸದಸ್ಯರಾದ ಚಂದ್ರಶೇಖರ ಪೆರಾಲು, ತೇಜಕುಮಾರ್ ಕುಡೆಕಲ್, ಚಂದ್ರಾವತಿ ಬಡ್ಡಡ್ಕ, ಲತಾ ಕುದ್ಪಾಜೆ, ಪಿ.ಎಸ್.ಕಾರ್ಯಪ್ಪ, ಡಾ.ಎನ್.ಎ.ಜ್ಞಾನೇಶ್ ಅವರು ಬೆಂಗಳೂರಿನಲ್ಲಿ ಭೇಟಿ ಮಾಡಿ ಪುಷ್ಪಗುಚ್ಛ ನೀಡಿದರು.
ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಎರಡು ಅಕಾಡೆಮಿಗಳ ಅಧ್ಯಕ್ಷರು ಮತ್ತು ಸದಸ್ಯರನ್ನು ಅಭಿನಂದಿಸಿದರು.
ಕೊಡಗು ಜಿಲ್ಲೆಯಲ್ಲಿ ಎರಡು ಅಕಾಡೆಮಿಗಳನ್ನು ಉತ್ತುಂಗಕ್ಕೆ ಕೊಂಡೊಯ್ಯುವಲ್ಲಿ ಶ್ರಮಿಸುವಂತೆ ಪೊನ್ನಣ್ಣ ಸಲಹೆ ನೀಡಿದರು.
ಕೊಡವ ಮತ್ತು ಅರೆಭಾಷೆಗಳಿಗೆ ತನ್ನದೇ ಆದ ಇತಿಹಾಸ ಮತ್ತು ವೈವಿಶಿಷ್ಟತೆ ಇದ್ದು, ಕೊಡವ ಮತ್ತು ಅರೆಭಾಷೆ ಬೆಳವಣಿಗೆಗೆ ಹೆಚ್ಚಿನ ಪರಿಶ್ರಮ ಅಗತ್ಯ. ಆ ನಿಟ್ಟಿನಲ್ಲಿ ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಕಾರ್ಯ ಪ್ರವೃತ್ತರಾಗುವಂತೆ ಶಾಸಕರು ಸಲಹೆ ನೀಡಿದರು.