ಸೋಮವಾರಪೇಟೆ ಜೂ.21 NEWS DESK : ಶಾಲಾ ಶಿಕ್ಷಣ ಇಲಾಖೆ, ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆ, ಸರಕಾರಿ ಪದವಿಪೂರ್ವ ಕಾಲೇಜು ಮತ್ತು ಪ್ರೌಢಶಾಲಾ ವಿಭಾಗ, ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಇಲ್ಲಿನ ಸಿಂಥೆಟಿಕ್ ಟರ್ಫ್ ಮೈದಾನದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳು ಯೋಗಾಭ್ಯಾಸ ಮಾಡಿದರು.
ವಿಶ್ವ ಯೋಗ ದಿನದ ಮಹತ್ವದ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ ಮಾತನಾಡಿ, ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯಕ್ಕೆ ಯೋಗ ಸಹಕಾರಿ. ವಿದ್ಯಾರ್ಥಿಗಳು ನಿರಂತರವಾಗಿ ಯೋಗಾಭ್ಯಾಸ ಮಾಡುವ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದರು.
ಯೋಗದ ಪ್ರಯೋಜನ ಕುರಿತು ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಬೆಳ್ಯಪ್ಪ, ಉಪನ್ಯಾಸಕಿ ತಿಲೋತ್ತಮೆ ಮಾತನಾಡಿದರು. ಕುವೆಂಪು ವಿದ್ಯಾಸಂಸ್ಥೆಯ ಬಿಟಿಸಿಜಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲರಾದ ಮಿಲ್‌ಡ್ರೆಡ್ ಗೋನ್ಸಾಲ್‌ವೇಸ್, ತಾಲೂಕು ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಗೋವಿಂದೇಗೌಡ ಇದ್ದರು.









