ಸೋಮವಾರಪೇಟೆ ಜೂ.21 NEWS DESK : ಶಾಲಾ ಶಿಕ್ಷಣ ಇಲಾಖೆ ಜಂಟಿ ನಿರ್ದೆಶಕರಾದ ಗೀತಾಂಬ ಅವರು ಸೋಮವಾರಪೇಟೆ ತಾಲೂಕಿನ ಸರಕಾರಿ ಪದವಿಪೂರ್ವ ಕಾಲೇಜಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು. ನಂತರ ನೇರುಗಳಲೆ ಸರಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಶಾಲಾ ಶೈಕ್ಷಣಿಕ ಪ್ರಗತಿಯನ್ನು ಪರಿಶೀಲಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ಈ ಸಂದರ್ಭ ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ, ಸಂಪನ್ಮೂಲ ಸಮನ್ವಯಾಧಿಕಾರಿ ಹೇಮಂತ್ ಇದ್ದರು.









