ಮಡಿಕೇರಿ ಜೂ.21 NEWS DESK : ಸಿದ್ದಾಪುರದ ಕಾಫಿ ತೋಟ ಸೇರಿದಂತೆ ಕೊಡಗು ಜಿಲ್ಲೆಯಾದ್ಯಂತ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ತಕ್ಷಣ ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿ ಜೂ.24 ರಂದು ಗೋಣಿಕೊಪ್ಪ ಬಸ್ ನಿಲ್ದಾಣದಲ್ಲಿ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಸಿಎನ್ಸಿ ವತಿಯಿಂದ ಸೋಮವಾರ ಬೆಳಿಗ್ಗೆ 10.30 ಗಂಟೆಗೆ ಶಾಂತಿಯುತ ಮಾನವ ಸರಪಳಿ ನಿರ್ಮಿಸಿ ಕೊಡವ ಲ್ಯಾಂಡ್ ನ ರಕ್ಷಣೆಗಾಗಿ ಹಕ್ಕೊತ್ತಾಯ ಮಂಡಿಸಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಭೂಮಾಫಿಯಾಗಳು ಹಾಗೂ ರಾಜಕೀಯ ಬೆಂಬಲಿತರು ಕೊಡಗಿನ ಕಾವೇರಿ ಜಲಾನಯನ ಪ್ರದೇಶದ ಭೂಮಿಗಳನ್ನು ದೊಡ್ಡ ಮಟ್ಟದಲ್ಲಿ ಖರೀದಿಸುತ್ತಿದ್ದು, ಕಪ್ಪು ಹಣದ ಚಲಾವಣೆಯಾಗುತ್ತಿದೆ. ಬೃಹತ್ ಕಾಫಿ ತೋಟಗಳ ಖರೀದಿಯ ನಂತರ ಅಕ್ಕಪಕ್ಕದ ಸಣ್ಣ ಹಿಡುವಳಿದಾರರ ಭೂಮಿಯನ್ನು ಹಣದ ಆಮಿಷವೊಡ್ಡಿ ಕಬಳಿಸಲಾಗುತ್ತಿದೆ.
ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ಮೂಲಕ ರೆಸಾರ್ಟ್ಗಳು, ದೈತ್ಯಾಕಾರದ ವಿಲ್ಲಾಗಳು, ಲೇಔಟ್ ಗಳು, ಮನೆಗಳು ಟೌನ್ ಶಿಪ್ ಗಳು, ವಾಣಿಜ್ಯ ಸಂಕೀರ್ಣಗಳ ನಿರ್ಮಾಣ ಸೇರಿದಂತೆ ವಾಣಜ್ಯ ಉದ್ದೇಶದ ಯೋಜನೆಗಳು ತಯಾರಾಗುತ್ತಿದೆ. ಇದು ಪವಿತ್ರ ಕೊಡವ ಲ್ಯಾಂಡ್ ನ ನಾಶಕ್ಕೆ ಕಾರಣವಾಗಬಹುದು.
ಕಾನೂನಿನ ಚೌಕಟ್ಟಿನಿಂದ ತಪ್ಪಿಸಿಕೊಳ್ಳಲು ಕಾಫಿ ತೋಟವನ್ನು ಸಂಪೂರ್ಣವಾಗಿ ಖರೀದಿಸಿ ನಿವೇಶನಗಳನ್ನಾಗಿ ಮಾರಾಟ ಮಾಡಿದ ನಂತರ ಭೂಪರಿರ್ತನೆಗೆ ಅರ್ಜಿ ಸಲ್ಲಿಸಲಾಗುತ್ತಿದೆ. ಇಡೀ ಕಾಫಿ ತೋಟದ ಭೂಪರಿವರ್ತನೆಗೆ ಮುಂದಾದರೆ ಕಾನೂನಿನ ಅಡ್ಡಿ ಮಾತ್ರವಲ್ಲ ಹೋರಾಟಗಳು ನಡೆಯುತ್ತವೆ ಎನ್ನುವ ಆತಂಕ ಭೂಮಾಪಿಯಾಗಳಿಗಿದೆ. ಬೃಹತ್ ರೆಸಾರ್ಟ್ ಗಳ ನಿರ್ಮಾಣದಿಂದ ವ್ಯವಹಾರ ಕುಸಿದರೂ ಕಪ್ಪು ಹಣವನ್ನು ಬಿಳಿ ಮಾಡುವುದಕ್ಕಾಗಿ ಇದನ್ನು ಬಳಸುವ ಹುನ್ನಾರವಿದೆ ಎಂದು ಆರೋಪಿಸಿದ್ದಾರೆ.
ಸರ್ಕಾರಗಳು ಡಾ.ಸ್ವಾಮಿನಾಥನ್ ಸಮಿತಿಯ ವರದಿಯನ್ನು ಉಲ್ಲಂಘಿಸಿವೆ. ಸ್ವಾಮಿನಾಥನ್ ತಮ್ಮ ವರದಿಯಲ್ಲಿ ಕೃಷಿಭೂಮಿಯನ್ನು ಹಾಗೆಯೇ ಉಳಿಸಿಕೊಳ್ಳಲು ಶಿಫಾರಸ್ಸು ಮಾಡಿದ್ದಾರೆ. ಲಭ್ಯವಿರುವ ಕೃಷಿಭೂಮಿಯ ಪ್ರಮಾಣ ಕಡಿಮೆಯಾದಂತೆ ಗ್ರಾಹಕರಿಗೆ ಲಭ್ಯವಿರುವ ಆಹಾರದ ಗುಣಮಟ್ಟ ಕಡಿಮೆಯಾಗುತ್ತದೆ. ಇದು ಆರ್ಥಿಕತೆಗೆ ಮಾತ್ರವಲ್ಲದೆ ಆರೋಗ್ಯದ ಮೇಲೆ ಹಾನಿ ಮಾಡುತ್ತದೆ. ಆರ್ಟಿಕಲ್ 51(ಎ), 51ಎ (ಎಫ್) – ನಮ್ಮ ಸಂಸ್ಕೃತಿಯ ಶ್ರೀಮಂತ ಪರಂಪರೆಯನ್ನು ಮೌಲ್ಯೀಕರಿಸಲು ಮತ್ತು ಸಂರಕ್ಷಿಸಲು, 51ಎ(ಜಿ)-ಕಾಡುಗಳು, ಸರೋವರಗಳು, ನದಿಗಳು ಮತ್ತು ವನ್ಯಜೀವಿಗಳನ್ನು ಒಳಗೊಂಡAತೆ ನೈಸರ್ಗಿಕ ಆರ್ಥಿಕತೆಯನ್ನು ಮೌಲ್ಯೀಕರಿಸಲು, ರಕ್ಷಿಸಲು, ಸುಧಾರಿಸಲು ಮತ್ತು ಜೀವಂತ ಜೀವಿಗಳ ಬಗ್ಗೆ ಸಹಾನುಭೂತಿ ಹೊಂದಲು, 51ಎ(ಎನ್)-ವೈಜ್ಞಾನಿಕ ಮನೋಭಾವ, ಮಾನವತಾವಾದ, ವಿಚಾರಣೆ ಮತ್ತು ಸುಧಾರಣೆಯ ಮನೋಭಾವವನ್ನು ಅಭಿವೃದ್ಧಿಪಡಿಸಲು ಸೂಚಿಸಲಾಗಿದೆ.
ಕರ್ನಾಟಕ ಭೂಸುಧಾರಣಾ ತಿದ್ದುಪಡಿ ಕಾಯ್ದೆ 79ಎ ಮತ್ತು 79ಬಿಯನ್ನು ದುರ್ಲಾಭಪಡಿಸಿಕೊಂಡು ಕೃಷಿ ಜಮೀನು, ಭತ್ತದ ಗದ್ದೆಗಳು ಮತ್ತು ಕಾಫಿ ತೋಟಗಳನ್ನು ಪರಿವರ್ತನೆ ಮಾಡಲಾಗುತ್ತಿದೆ. ಕುಟ್ಟ-ಶ್ರೀಮಂಗಲದಲ್ಲಿ ಉದ್ದೇಶಿತ ಪಟ್ಟಣಗಳು ಮತ್ತು ಆರ್ಥಿಕ ಕಾರಿಡಾರ್ಗಳಿಗಾಗಿ ಭೂಮಿಯನ್ನು ಜೂಜಾಟದ ರೀತಿಯಲ್ಲಿ ಖರೀದಿಸಲಾಗುತ್ತಿದೆ. ಬೆಂಗಳೂರು, ತಿರುವನಂತಪುರ, ಚೆನ್ನೆöÊ, ಹೈದರಬಾದ್ ಸೇರಿದಂತೆ ದೇಶದ ವಿವಿಧೆಡೆಯ ಭೂಮಾಫಿಯ ಮತ್ತು ರಾಜಕೀಯ ಸಂಯೋಜಿತ ಗುಂಪುಗಳು ಈ ಕಾರ್ಯದಲ್ಲಿ ತೊಡಗಿವೆ. ಶ್ರೀಮಂಗಲ ಮತ್ತು ಕುಟ್ಟ ಭಾಗದಲ್ಲಿ ಗಡಿ ಜಿಲ್ಲೆ ಹಾಗೂ ಗಡಿರಾಜ್ಯದ ಮತ ಬ್ಯಾಂಕ್ ಗಳನ್ನು ಸೆಳೆಯುವ ದೊಡ್ಡ ಷಡ್ಯಂತ್ರವೂ ನಡೆಯುತ್ತಿದೆ ಎಂದು ನಾಚಪ್ಪ ಆರೋಪಿಸಿದ್ದಾರೆ.
ಆದಿಮಸಂಜಾತ ಕೊಡವರ ಹಕ್ಕುಗಳನ್ನು ರಕ್ಷಿಸಲು “ಕೊಡವ ಲ್ಯಾಂಡ್” ಸ್ವಯಂ ನಿರ್ಣಯದ ಭೂರಾಜಕೀಯ ಸ್ವಾಯತ್ತತೆ ಘೋಷಣೆ ಮತ್ತು ಕೊಡವರಿಗೆ ಎಸ್ಟಿ ಟ್ಯಾಗ್ ನೀಡುವುದು ಅಗತ್ಯವೆಂದು ತಿಳಿಸಿದ್ದಾರೆ.
ನಮ್ಮ ಅನುವಂಶಿಕ ಭೂಮಿಯನ್ನು ಉಳಿಸಿಕೊಳ್ಳಲು, ಮಾತೃಭೂಮಿ, ಶಾಶ್ವತವಾದ ದೀರ್ಘಕಾಲಿಕ ಜಲಸಂಪನ್ಮೂಲಗಳು, ನಯನ ಮನೋಹರ ಪರಿಸರ, ಭೂಗೋಳವನ್ನು ನೈಸರ್ಗಿಕವಾಗಿ ವಿಹಂಗಮ ಪರ್ವತಗಳು, ಬೆಟ್ಟಗಳು, ನಿತ್ಯಹರಿದ್ವರ್ಣದ ಸಸ್ಯ ಮತ್ತು ಪ್ರಾಣಿ ಸಂಕುಲಗಳು ಜೈವಿಕ ವೈವಿಧ್ಯತೆ, ಕೊಡವ ಬುಡಕಟ್ಟು ಜನಾಂಗದ ಶ್ರೀಮಂತ ಜಾನಪದ ಪರಂಪರೆ ಮತ್ತು ಭೂಮಿಯೊಂದಿಗೆ ಬೆಸೆದುಕೊಂಡಿರುವ ಕೊಡವರ ಯೋಧರ ಪರಂಪರೆಯನ್ನು ಉಳಿಸಿಕೊಳ್ಳಬೇಕಾಗಿದೆ. ಈ ಮಣ್ಣಿನಲ್ಲಿ ನಮ್ಮ ಐತಿಹಾಸಿಕ ನಿರಂತರತೆಗಾಗಿ ಸ್ವಯಂ-ಆಡಳಿತವನ್ನು ಸಂವಿಧಾನದ ವಿಧಿ 244, 371 ಆರ್/ಡಬ್ಲ್ಯೂ 6 ಮತ್ತು 8ನೇ ಶೆಡ್ಯೂಲ್ ಮತ್ತು ಆಂತರಿಕ ರಾಜಕೀಯ ಸ್ವ-ನಿರ್ಣಯ ಹಕ್ಕುಗಳು ವಿಶ್ವ ರಾಷ್ಟ್ರ ಸಂಸ್ಥೆ ಹೊರಡಿಸಿರುವ ಆದಿಮಸಂಜಾತ ಜನಾಂಗದ ಹಕ್ಕುಗಳ ಅಂತರಾಷ್ಟ್ರೀಯ ಕಾನೂನಿನಂತೆ ಜಾರಿಯಾಗುವ ಅಗತ್ಯವಿದೆ. ಇದಕ್ಕಾಗಿ ವ್ಯಾಪಕ ಜನಜಾಗೃತಿ ಅಗತ್ಯವಾಗಿದ್ದು, ಜಿಲ್ಲೆಯಾದ್ಯಂತ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಹೇಳಿದ್ದಾರೆ.
ಸೋಮವಾರ ಗೋಣಿಕೊಪ್ಪದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸರ್ವ ಕೊಡವರು ಪಾಲ್ಗೊಂಡು ಕೊಡವ ಲ್ಯಾಂಡ್ ನ ರಕ್ಷಣೆಗಾಗಿ ಒಗ್ಗಟ್ಟು ಪ್ರದರ್ಶಿಸುವಂತೆ ಎನ್.ಯು.ನಾಚಪ್ಪ ಮನವಿ ಮಾಡಿದ್ದಾರೆ.
Breaking News
- *ಕೊಡಗಿನ ಆದಿವಾಸಿಗಳ ಸಮಸ್ಯೆಗಳನ್ನು ಆಲಿಸಿದ ಮುಖ್ಯಮಂತ್ರಿ : ಅಧಿಕಾರಿಗಳಿಗೆ 2 ತಿಂಗಳ ಗಡುವು*
- *ಸಿಎನ್ಸಿಯಿಂದ “ಕೊಡವ ನ್ಯಾಷನಲ್ ಡೇ” ಮತ್ತು ಸಂವಿಧಾನ ದಿನಾಚರಣೆ : 9 ಪ್ರಮುಖ ನಿರ್ಣಯಗಳ ಮಂಡನೆ*
- *ಮಡಿಕೇರಿ : ನ.27 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
- *ಮಡಿಕೇರಿಯಲ್ಲಿ ಮಕ್ಕಳ ದಿನಾಚರಣೆ : ಮಕ್ಕಳ ಪ್ರತಿಭೆಯನ್ನು ಪ್ರೋತ್ಸಾಹಿಸಿ : ಸಿವಿಲ್ ನ್ಯಾಯಾಧೀಶೆ ಶುಭ*
- *ವಿರಾಜಪೇಟೆಯಲ್ಲಿ ನ.27 ರಂದು ಕಾವೇರಿ ಕಾರ್ನಿವಾಲ್ ಫೆಸ್ಟ್*
- *ಚೆಟ್ಟಳ್ಳಿ ಗ್ರಾ.ಪಂ ಉಪಚುನಾವಣೆ : ಅಯ್ಯಂಡ್ರ ಭಾಗೀರಥಿ ಗೆಲುವು*
- *ಸಹಕಾರ ತರಬೇತಿ (ಡಿಸಿಎಂ)ಗೆ ಅರ್ಜಿ ಆಹ್ವಾನ*
- *ತ್ಯಾಗರಾಜ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ : ಪರಿಸರರೊಂದಿಗೆ ಮಕ್ಕಳು ಬೆಳೆಯಬೇಕು : ಗೀತಾ ಗಿರೀಶ್*
- *ಮಡಿಕೇರಿಯಲ್ಲಿ ಸಂವಿಧಾನ ದಿನಾಚರಣೆ : ರಾಷ್ಟ್ರದ ಅಭಿವೃದ್ಧಿಗೆ ಸಂವಿಧಾನ ಪಾತ್ರ ಪ್ರಮುಖ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ*
- *ಪುತ್ತೂರು : ವಿಸಿಇಟಿಯಲ್ಲಿ ಮಂಗಳೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾವಳಿ*