ಕೂಡಿಗೆ ಜೂ.22 NEWS DESK : ಯೋಗವು ಮಾನವನ ದೇಹವನ್ನು ಶಾರೀರಿಕವಾಗಿ, ಆಧ್ಯಾತ್ಮಿಕವಾಗಿ, ಬೌದ್ಧಿಕವಾಗಿ ಸಯೋಜನೆಗೊಳಿಸಿ ಸಮತೋಲನದಲ್ಲಿರಿಸಿ ಮನುಷ್ಯನನ್ನು ರೋಗಮುಕ್ತಗೊಳ್ಳುತ್ತದೆ ಎಂದು ಸದ್ಗುರು ಅಪ್ಪಯ್ಯ ಸ್ವಾಮಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಪುಷ್ಪ ಹೇಳಿದರು.
ಕೂಡಿಗೆಯ ಸದ್ಗುರು ಅಪ್ಪಯ್ಯ ಸ್ವಾಮಿ ಪ್ರೌಢಶಾಲಾ ಸಭಾಂಗಣದಲ್ಲಿ ಏರ್ಪಡಿಸಿದ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇಶಾದ್ಯಂತ ಪ್ರಪಂಚದಾದ್ಯಂತ ಯೋಗ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಯೋಗ ಕೇವಲ ಒಂದು ದಿನಕ್ಕೆ ಸೀಮಿತವಾಗದೆ ನಿತ್ಯದ ದಿನಚರಿಯಾಗಬೇಕು. ಯೋಗದಿಂದ ಮಾನಸಿಕ ದೈಹಿಕವಾಗಿ ಸದೃಢವಾಗುವುದರ ಮೂಲಕ ಸ್ವಾಸ್ಥ ಸಮಾಜ ನಿರ್ಮಾಣಕ್ಕೆ ನಾಂದಿಯಾಗುತ್ತದೆ ಎಂದು ತಿಳಿಸಿದರು.
ಶಿಕ್ಷಕ ಸೋಮಯ್ಯ ಮಾತನಾಡಿ. ಊಟ ಬಲ್ಲವನಿಗೆ ರೋಗವಿಲ್ಲ ಮಾತು ಬಲ್ಲವನಿಗೆ ಜಗಳವಿಲ್ಲ ಎಂಬ ಹಿರಿಯರ ನಾನ್ನುಡಿಯಂತೆ ಯೋಗ ಮತ್ತು ಧ್ಯಾನ ಮಾಡುವುದರಿಂದ ಸದೃಢ ಆರೋಗ್ಯವಂತ ಜೀವನ ನಡೆಸಬಹುದು ಎಂಬ ಸತ್ಯವನ್ನು ಅರಿತು ಪ್ರತಿದಿನವೂ ಯೋಗ ಮಾಡಿ ರೋಗ ರುಜಿನಗಳಿಂದ ದೂರವಿದ್ದು, ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು. ಶಾಲಾ ಶಿಕ್ಷಕಿ ಕುಸುಮ ಮಾತನಾಡಿ, ವಿಶ್ವಕ್ಕೆ ಯೋಗ ಮತ್ತು ಆರ್ಯವೇದದ ಮಹತ್ವವನ್ನು ಸಾರಿದರು. ಭಾರತ ದೇಶವು ವಿಶ್ವದ ಪ್ರಮುಖ ಯೋಗ ರಾಷ್ಟ್ರವಾಗಿ ಹೊರವಮ್ಮುವ ಮೂಲಕ ಇತಿಹಾಸ ನಿರ್ಮಿಸಿದೆ. ಪ್ರತಿ ದಿನವೂ ಯೋಗಭ್ಯಾಸ ಮಾಡಿ ಆರೋಗ್ಯವಂತರಾಗಿ ಸ್ವಾಭಿಮಾನಿ ಬದುಕು ನಡೆಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸದ್ಗುರು ಅಪ್ಪಯ್ಯ ಸ್ವಾಮಿ ಪ್ರೌಢಶಾಲೆಯ ವೃತ್ತಿ ಶಿಕ್ಷಣ ಶಿಕ್ಷಕರು. ಎಂ ಎಸ್ ಕುಸುಮ ಕಲಾ ಶಿಕ್ಷಕರು. ಸುರೇಶ್ ಕೆ ಎಸ್. ರತನ್ ಜೆ ಎಸ್ .ಕಾವ್ಯ ಎಂ ಎನ್. ಹಾಗೂ ದೀಪಕ್. ಅಟೆಂಡರ್ ರಘು. ಹಾಗೂ ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು. (ವರದಿ : ಕೆ.ಆರ್.ಗಣೇಶ್ ಕೂಡಿಗೆ)
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*