ಮಡಿಕೇರಿ ಜೂ.22 NEWS DESK : ಸಿದ್ದಾಪುರ ಶ್ರೀ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.
ಸಂಸ್ಥೆಯ ದೈಹಿಕ ಶಿಕ್ಷಕಿ ಮಾಲಿನಿ ವಿದ್ಯಾರ್ಥಿಗಳಿಗೆ ಯೋಗ ಪ್ರದರ್ಶನ ನಡೆಸಿ, ಯೋಗದಿಂದಾಗುವ ಪ್ರಯೋಜಗಳ ಕುರಿತು ಮಾಹಿತಿ ನೀಡಿದರು.
ಬಿಜಿಎಸ್ ಪಬ್ಲಿಕ್ ಸ್ಕೂಲ್, ಬಿಜಿಎಸ್ ಪದವಿ ಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸಂಸ್ಥೆಯ ವ್ಯವಸ್ಥಾಪಕರಾದ ಮಂಜುನಾಥ್, ಪ್ರಾಂಶುಪಾಲರಾದ ಕಾಳೇಗೌಡ, ಬೋಧಕ ಹಾಗೂ ಬೋಧಕೇತರ ವರ್ಗದವರು ಯೋಗ ಆಚರಣೆಯಲ್ಲಿ ಪಾಲ್ಗೊಂಡಿದ್ದರು.