ಮಡಿಕೇರಿ ಜೂ.22 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಪ್ರತಿಕೃತಿಯನ್ನು ದಹಿಸಿದ ಬಿಜೆಪಿ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಪಕ್ಷ ಸಂಪಾಜೆ ಚೆಕ್ ಪೋಸ್ಟ್ ಬಳಿ ಪ್ರತಿಭಟನೆ ನಡೆಸಿತು.
ಬಾಯಿಗೆ ಕಪ್ಪುಪಟ್ಟಿ ಧರಿಸಿ ಮೌನ ಮೆರವಣಿಗೆಯಲ್ಲಿ ಬಂದ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಬಿಜೆಪಿ ನಡೆಯನ್ನು ತೀವ್ರವಾಗಿ ಖಂಡಿಸಿದರು. ಬಿಜೆಪಿ ಮಂದಿ ವಿಕೃತ ಮನಸ್ಥಿತಿಯನ್ನು ಪ್ರದರ್ಶಿಸಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ವಿಕೃತ ಮನಸ್ಥಿತಿಯ ಪ್ರತಿಕೃತಿಯನ್ನು ಸಾಂಕೇತಿಕವಾಗಿ ದಹಿಸಿ ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲಾ ಕಾಂಗ್ರೆಸ್ ಸಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು ಮಾತನಾಡಿ ಬಿಜೆಪಿ ಶಾಸಕ ಪೊನ್ನಣ್ಣ ಅವರ ಪ್ರತಿಕೃತಿ ದಹನ ಮಾಡುವ ಮೂಲಕ ತನ್ನ ಪ್ರಜ್ಞಾಹೀನ ಮನಸ್ಥಿತಿಯನ್ನು ಪ್ರದರ್ಶಿಸಿದೆ. ಪ್ರತಿಭಟನೆಯ ಹಿಂದಿನ ರಾಜಕೀಯ ದುರುದ್ದೇಶ ಬಯಲಾಗಿದೆ ಎಂದು ಆರೋಪಿಸಿದರು. ಕಾಂಗ್ರೆಸ್ ವಲಯಾಧ್ಯಕ್ಷ ಸುರೇಶ್ ಪಿ.ಎಲ್, ಚೆಂಬು ಅಧ್ಯಕ್ಷ ರವಿ ಹೊಸೂರು, ಪೆರಾಜೆ ಅಧ್ಯಕ್ಷ ಜಯರಾಮ್, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್, ಸಾಮಾಜಿಕ ಜಾಲತಾಣದ ಉಪಾಧ್ಯಕ್ಷ ಡಾ.ನಿಶ್ಚಲ್ ದಂಬೆಕೋಡಿ, ಬ್ಲಾಕ್ ಕಾರ್ಯದರ್ಶಿ ಮನು, ಮಾಜಿ ಯುವ ಅಧ್ಯಕ್ಷ ಹನೀಫ್ ಸಂಪಾಜೆ, ಅಕ್ರಮ ಸಕ್ರಮ ಸಮಿತಿ ಸದಸ್ಯೆ ತುಳಸಿ, ನಾಪೋಕ್ಲು ಬ್ಲಾಕ್ ಮಹಿಳಾ ಅಧ್ಯಕ್ಷೆ ರಾಜೇಶ್ವರಿ ಕೆ.ಕೆ, ಅನುಷ್ಠಾನ ಸಮಿತಿ ಕಾರ್ಯದರ್ಶಿ ಬಷೀರ್, ಜಿ.ಪಂ ಮಾಜಿ ಸದಸ್ಯ ಮೊಹಿದ್ದೀನ್ ಕುಜ್ಞ, ಗ್ರಾ.ಪಂ ಸದಸ್ಯರುಗಳಾದ ಆದಂ, ಕುಸುಮ, ಶಶಿಕಲಾ, ಭೂದೇವಿ, ಸ್ಯೆದಾಲವಿ, ಪ್ರಮುಖರಾದ ತಿರುಮಲ ಸೋನಾ, ಭಾರತಿ ಕುಶಲ ಚೆಂಬು, ಸೋಮಣ್ಣ ಬಾಲಂಬಿ, ಚೆನ್ನಪ್ಪ, ಉಮೇಶ್ ನಿಡುಬೆ, ರಿತಿನ್, ರುನೈಜ್, ರಾಜೇಶ್, ಅಬ್ಬೂಬಕ್ಕರ್ ಪೆರಾಜೆ, ಶಿಯಾಬ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪ್ರತಿಭಟನಾಕಾರರು ಚೆಕ್ ಪೋಸ್ಟ್ ಬಳಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲು ಮುಂದಾದಾಗ ಪೊಲೀಸರು ಅವಕಾಶ ನೀಡಲಿಲ್ಲ.











