ನಾಪೋಕ್ಲು ಜೂ.22 NEWS DESK : ಕೊಡಗು ಜಿಲ್ಲಾ ಬಿಜೆಪಿ ರೈತ ಮೋರ್ಚಾ ಹಾಗೂ ನಾಪೋಕ್ಲು ಶಕ್ತಿ ಕೇಂದ್ರದ ವತಿಯಿಂದ ವಿಶ್ವ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ನಾಪೋಕ್ಲು ಭಗವತಿ ಸಮೂದಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಕಾರ್ಯಕರ್ತರು ಯೋಗದ ವಿವಿಧ ಭಂಗಿಗಳನ್ನು ಪ್ರದರ್ಶಿಸಿ ಗಮನ ಸೆಳೆದರು.
ಈ ಸಂದರ್ಭ ಮಾತನಾಡಿದ ಭಗವತಿ ದೇವಾಲಯದ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಕುಲ್ಲೆಟಿರ ಗುರುವಪ್ಪ, ಮನುಷ್ಯ ಆರೋಗ್ಯವನ್ನು ಉತ್ತಮವಾಗಿ ಕಾಪಾಡುವಲ್ಲಿ ಯೋಗ ಸಹಕಾರಿಯಾಗಿದೆ. ನಿರಂತರವಾಗಿ ಯೋಗಾಭ್ಯಾಸ ಮಾಡವುದರಿಂದ ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ನೆಮ್ಮದಿಯನ್ನು ಕಾಯ್ದುಕೊಳ್ಳಬಹುದು ಎಂದರು.
ಕಾರ್ಯಕ್ರಮದಲ್ಲಿ ಶಕ್ತಿ ಕೇಂದ್ರ ಪ್ರಮುಕ್ ಶಿವಚಾಳಿಯಂಡ ಅಂಬಿ ಕಾರ್ಯಪ್ಪ, ಜಿಲ್ಲಾ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿವಚಾಳಿಯಂಡ ಜಗದೀಶ್, ಮಡಿಕೇರಿ ಗ್ರಾಮಾಂತರ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಬಿ.ಎಂ.ಪ್ರತೀಪ, ಹಿಂದೂ ಸಂಘಟನೆಯ ಕಂಗಂಡ ಜಾಲಿ ಪೂವಪ್ಪ, ಸಾಬು ನಾಣಯ್ಯಟೋಳಿರ ಡಾಲಿ ಅಚ್ಚಪ್ಪ, ಲೋಕೇಶ, ಪ್ರಕಾಶ್, ಸೂರಜ್, ಅರೆಯಡ ರತ್ನ ಪೆಮ್ಮಯ್ಯ, ಚರಣ್ ಇನ್ನಿತರರು ಭಾಗವಹಿಸಿದ್ದರು.
ವರದಿ : ದುಗ್ಗಳ ಸದಾನಂದ