ನಾಪೋಕ್ಲು ಜೂ.23 NEWS DESK : ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 10ನೇ ಅಂತಾರಾಷ್ಟ್ರಿಯ ವಿಶ್ವ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಟ್ರಸ್ಟಿನ ಮಾಜಿ ಅಧ್ಯಕ್ಷ ಕಲ್ಯಾಟoಡ ಪ್ರೊ.ಪೂಣಚ್ಚ ಮಾತನಾಡಿ, ಉತ್ತಮ ಆರೋಗ್ಯ ಮತ್ತು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಯೋಗ ಮುಖ್ಯ ಪಾತ್ರ ವಹಿಸುತ್ತದೆ ಎಂದರು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಉತ್ತಮ ಹವ್ಯಾಸಗಳನ್ನು ಮೈಗೂಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು. ಮುಖ್ಯ ಶಿಕ್ಷಕಿ ಶಾರದಾ ದಿನದ ಮಹತ್ವದ ಬಗ್ಗೆ ಮಾತನಾಡಿ. ಮಕ್ಕಳಿಗೆ ಯೋಗದ ಬಗ್ಗೆ ಮಾರ್ಗದರ್ಶನ ನೀಡಿದರು..
ಅಧ್ಯಕ್ಷ ಕಲಿಯಂಡ ಹ್ಯಾರಿ ಮಂದಣ್ಣ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದ ಮತ್ತು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ಈ ಸಂದರ್ಭ ವಿದ್ಯಾರ್ಥಿಗಳು ಪ್ರಾಣಾಯಾಮ, ಸೂರ್ಯ ನಮಸ್ಕಾರ ಸೇರಿದಂತೆ ಹಲವು ಯೋಗಾಸನಗಳನ್ನು ಮಾಡಿದರು.
ವರದಿ : ದುಗ್ಗಳ ಸದಾನಂದ.