ನಾಪೋಕ್ಲು ಜೂ.22 NEWS DESK : ನಾಪೋಕ್ಲು ಹೋಬಳಿ ವ್ಯಾಪ್ತಿಯ ವಿವಿಧ ಶಾಲಾ ಕಾಲೇಜು, ಸಂಘ ಸಂಸ್ಥೆಗಳು, ಆಯುಷ್ ಆರೋಗ್ಯ ಕ್ಷೇಮ ಕೇಂದ್ರದ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಬಲ್ಲಮಾವಟಿ ಆಯುಷ್ ಆರೋಗ್ಯ ಕ್ಷೇಮ ಕೇಂದ್ರದದಲ್ಲಿ ಯೋಗಾಸಕ್ತರು, ಆರೋಗ್ಯಕಾಂಕ್ಷಿಗಳು,ಪ್ರೌಢಶಾಲಾ ವಿದ್ಯಾರ್ಥಿಗಳು, ಆಯುಷ್ ಆರೋಗ್ಯ ಕ್ಷೇಮ ಕೇಂದ್ರದ ಸಭಾಂಗಣದಲ್ಲಿ ಯೋಗಾಭ್ಯಾಸದಲ್ಲಿ ಪಾಲ್ಗೊಂಡಿದ್ದರು.
ಯೋಗ ತರಬೇತುದಾರರಾಗಿ ಕೆ.ಬಿ.ಪವಿತ್ರ,ಎನ್.ಎಸ್.ಪುಷ್ಪ ಪಾಲ್ಗೊಂಡಿದ್ದು, ವಿವಿಧ ಹಂತದ ಯೋಗ ಪ್ರದರ್ಶಿಸಿದರು.
ಆಯುಷ್ ಆರೋಗ್ಯ ಕ್ಷೇಮ ಕೇಂದ್ರ ವೈದ್ಯಾಧಿಕಾರಿ ಡಾ.ಶುಭಾ ಮಾತನಾಡಿ, ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯಕ್ಕೆ ಯೋಗ ಸಹಕಾರಿ ಎಂದರು. ವಿವಿಧ ಶಾಲೆಗಳ ಶಿಕ್ಷಕರು, ವಿದ್ಯಾರ್ಥಿಗಳು, ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ವರದಿ : ದುಗ್ಗಳ ಸದಾನಂದ.