ವಿರಾಜಪೇಟೆ ಜೂ.22 NEWS DESK : ಸರ್ವೋದಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಯೋಗ ಪ್ರಶಸ್ತಿ ವಿಜೇತೆ ವಿ.ಕೆ.ಲಲಿತಾ ಮಾತನಾಡಿ, ದೇಹ ಮತ್ತು ಮನಸ್ಸು ಶುಭ್ರವಾಗಿಟ್ಟುಕೊಂಡು ಒತ್ತಡ ರಹಿತ ಜೀವನ ನಡೆಸುವಲ್ಲಿ ಯೋಗದ ಮಹತ್ವವನ್ನು ವಿವರಿಸಿದರು.
ಯೋಗ ಶಿಕ್ಷಣದ ಉಪ ಸಂಯೋಜಕ ಕೆ.ಎಸ್.ರಾಜಶೇಖರ್ ನಿರ್ದೇಶನದಲ್ಲಿ ವಿದ್ಯಾರ್ಥಿ ಶಿಕ್ಷಕರಿಂದ ಯೋಗ ಪ್ರಾತ್ಯಕ್ಷಿಕೆ ನಡೆಯಿತು.
ಉಪನ್ಯಾಸಕಾರದ ಡಾ. ಎಂ.ವಾಣಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಯೋಗ ಶಿಕ್ಷಣದ ಸಂಯೋಜಕರಾದ ಪದ್ಮಲತಾ ಹಾಗೂ ಎಲ್ಲಾ ಶಿಕ್ಷಕ ಶಿಕ್ಷಕೇತರ ವೃಂದದವರು ಹಾಗೂ ಎಲ್ಲಾ ಪ್ರಶಿಕ್ಷಣಾರ್ಥಿಗಳು ಹಾಜರಿದ್ದರು. ಶಿಕ್ಷಣಾರ್ಥಿಗಳಾದ ಅನುಷಾ ಹಾಗೂ ಮನೋಜ್ ಕಾರ್ಯಕ್ರಮವನ್ನು ನಡೆಸಿಕೊಟ್ಟರು.