ವಿರಾಜಪೇಟೆ ಜೂ.22 NEWS DESK : ವಿರಾಜಪೇಟೆಯ ಪ್ರಗತಿ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಶಾಲಾ ಆಡಳಿತಾಧಿಕಾರಿ ಅಂತರಾಷ್ಟ್ರೀಯ ರಗ್ಬಿ ಆಟಗಾರ ಮಾದಂಡ ತಿಮ್ಮಯ್ಯ ಮತ್ತು ಸುಷ್ಮಾ ತಿಮ್ಮಯ್ಯ ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಯೋಗಾಸನದ ಮಹತ್ವದ ಕುರಿತು ಮಾಹಿತಿ ನೀಡಿ ವಿವಿಧ ಭಂಗಿಗಳನ್ನು ಪ್ರದರ್ಶಿಸಿದರು.
ಈ ಸಂದರ್ಭ ಪ್ರಾಂಶುಪಾಲರಾದ ವಿಮಲ್ ಪ್ರಭು ಮತ್ತು ಕ್ರೀಡಾ ಸಂಯೋಜಕ ಶಿವಶಕ್ತಿ ಸೇರಿದಂತೆ ಶಾಲೆಯ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಇದ್ದರು.