ಮಡಿಕೇರಿ ಜೂ.22 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪದವಿಪೂರ್ವ ಕಾಲೇಜುಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅಭಿವೃದ್ಧಿ ಹಾಗೂ ಕೊಠಡಿಗಳ ನಿರ್ಮಾಣದ ಕುರಿತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ಅವರು ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತ ಸಚಿವ ಎಸ್.ಮಧು ಬಂಗಾರಪ್ಪ ಅವರ ನಿವಾಸದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.