ಮಡಿಕೇರಿ ಜೂ.22 NEWS DESK : ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ಮತ್ತು ಹುಣುಸೂರು ಮಾರ್ಗವಾಗಿ ಕೊಡಗು ಜಿಲ್ಲೆಯ ವಿರಾಜಪೇಟೆ- ಸಿದ್ದಾಪುರ ಅರಣ್ಯ ವ್ಯಾಪ್ತಿಯ ಹೆದ್ದಾರಿಯಲ್ಲಿ ರಾತ್ರಿ ವೇಳೆ ಸಂಚರಿಸುವವರಿಗೆ ದರೋಡೆಕೋರರ ಆತಂಕವಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊAಡ ಪ್ರಕರಣದ ತನಿಖೆ ನಡೆಸಿರುವ ಕೊಡಗು ಪೊಲೀಸರು ಇದೊಂದು ಸುಳ್ಳು ಸುದ್ದಿ ಎನ್ನುವುದನ್ನು ಖಾತ್ರಿ ಪಡಿಸಿದ್ದಾರೆ.
ಕೆಲವು ವ್ಯಕ್ತಿಗಳು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊAಡಿರುವ ಮಾಹಿತಿ ಕೇವಲ ಊಹಾಪೋಹವಾಗಿದೆ. ಪಿರಿಯಾಪಟ್ಟಣ- ಹುಣುಸೂರು- ವಿರಾಜಪೇಟೆ- ಸಿದ್ದಾಪುರ ಮಾರ್ಗದಲ್ಲಿ ಆತಂಕದ ವಾತಾವರಣವಿಲ್ಲ. ಯಾವುದೇ ವೇಳೆಯಲ್ಲಿ ಪ್ರಯಾಣಿಸಬಹುದಾಗಿದೆ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಸ್ಪಷ್ಟಪಡಿಸಿದ್ದಾರೆ.
ಪೊಲೀಸ್ ಇಲಾಖೆ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ವಹಿಸಿದ್ದು, ಸುಳ್ಳು ಸುದ್ದಿ, ವದಂತಿಗಳನ್ನು ಹರಡುವುದು, ಶಾಂತಿ ಸೌಹಾರ್ದತೆಗೆ ದಕ್ಕೆ ತರಬಹುದಾದ ಮಾಹತಿಗಳನ್ನು ಹಂಚಿಕೊAಡಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಎಸ್‌ಪಿ ಎಚ್ಚರಿಕೆ ನೀಡಿದ್ದಾರೆ.
Breaking News
- *ಖೋ ಖೋ ವಿಶ್ವಕಪ್ : ರಾಜ್ಯದ ಇಬ್ಬರು ಆಟಗಾರರಿಗೆ ತಲಾ 5 ಲಕ್ಷ ರೂ. ಘೋಷಿಸಿದ ಸಿಎಂ*
- *ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನದ ಆಕರ್ಷಣೆ*
- *ರೈಲ್ವೆ ಇಲಾಖೆಯ 32,438 ಗ್ರೂಪ್-ಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ*
- *ಭಾಗಮಂಡಲ ಗ್ರಾ.ಪಂ ವತಿಯಿಂದ ಅಂಗನವಾಡಿಗಳಿಗೆ ಕೊಡುಗೆ*
- *ಗಣರಾಜ್ಯೋತ್ಸವದಂದು ಸಿಎನ್ಸಿಯಿಂದ ಶಾಂತಿಯುತ ಹಕ್ಕೊತ್ತಾಯ ಮಂಡನೆ*
- *ಪ್ರಾಣಿ ದಯಾಸಂಘದ ವಾರ್ಷಿಕ ಮಹಾಸಭೆ : ಹಲವು ವಿಚಾರ ಕುರಿತು ಚರ್ಚೆ*
- *ರಾಜಾಸೀಟು ಉದ್ಯಾನದಲ್ಲಿ ಕಣ್ಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ : ಶಾಸಕ ಡಾ.ಮಂತರ್ ಗೌಡ ಉದ್ಘಾಟನೆ*
- *ರಾಜಾಸೀಟು ಫಲಪುಷ್ಪ ಪ್ರದರ್ಶನದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಾಲಯದ ಆಕರ್ಷಣೆ*
- *ಮಡಿಕೇರಿಯಲ್ಲಿ ಹಿರಿಯ ನಾಗರಿಕರಿಗೆ ಕಣ್ಣಿನ ತಪಾಸಣಾ ಶಿಬಿರ*
- *ಯತಿಕಾರ್ಪ್ ಇಂಡಿಯಾ ಐಟಿ ಕಂಪನಿಯಲ್ಲಿ ಪದವೀಧರರಿಗೆ ಉದ್ಯೋಗ ಅವಕಾಶ : ಉತ್ತಮ ವೇತನ*