ಮಡಿಕೇರಿ ಜೂ.22 NEWS DESK : ಕೊಡಗಿನ ವಿಶಿಷ್ಟ ಸಂಸ್ಕೃತಿ ಮತ್ತು ಪರಂಪರೆಯನ್ನು ಮರೆತು ವಿರಾಜಪೇಟೆ ಕ್ಷೇತ್ರದ ಶಾಸಕ, ಕೊಡವ ಸಮೂಹದ ಎ.ಎಸ್.ಪೊನ್ನಣ್ಣ ಅವರ ಪ್ರತಿಕೃತಿಯನ್ನು ಬಿಜೆಪಿ ಪ್ರಮುಖರು ದಹಿಸಿರುವುದು ಖಂಡನೀಯವೆAದು ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತಾನೊಬ್ಬ ಕೊಡವತಿಯಾಗಿ ಮಾತನಾಡುತ್ತಿದ್ದೇನೆಯೇ ಹೊರತು ರಾಜಕಾರಣಿಯಾಗಿ ಅಲ್ಲವೆಂದು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ ಅವರು, ಬಿಜೆಪಿ ಜಿಲ್ಲೆಯ ಜನತೆಯ ಕ್ಷಮೆ ಕೋರಬೇಕೆಂದು ಆಗ್ರಹಿಸಿದರು. ಇಂಧನ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ವಿರಾಜಪೇಟೆಯಲ್ಲಿ ಬಿಜೆಪಿ ನಡೆಸಿದ ಪ್ರತಿಭಟನೆಯಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಅವರ ಪ್ರತಿಕೃತಿ ದಹಿಸಲಾಗಿದ್ದು, ಅದರಲ್ಲಿ ಸ್ಥಳೀಯ ಸಂಸ್ಕೃತಿಯ ಬಗ್ಗೆ ಅರಿವಿರುವ ಕೊಡವ ಮಹಿಳೆಯರು ಪಾಲ್ಗೊಂಡಿರುವುದು ಬೇಸರ ತರಿಸಿದೆ. ಬಿಜೆಪಿಯ ಇಂತಹ ನಡೆಗಳು ಆ ಪಕ್ಷದ ಅವನತಿಗೆ ಹಾದಿಯಾಗಿದೆ ಎಂದರು. ಕೊಡವರಿಗೆ ಹುಟ್ಟು ಸಾವಿನ ಸಂದರ್ಭ ಅವರದ್ದೇ ಆದ ಆಚರಣೆಗಳು, ಪದ್ಧತಿ ಪರಂಪರೆಗಳಿವೆ. ಬೀದಿಯಲ್ಲಿ ಕೊಡವ ಸಮೂಹಕ್ಕೆ ಸೇರಿದ ಜನಪ್ರತಿನಿಧಿಯ ಪ್ರತಿಕೃತಿ ದಹಿಸಲಾಗಿದೆ. ಈ ಸಂದರ್ಭ ಬಿಜೆಪಿಯಲ್ಲಿನ ಕೆಲವು ಕೊಡವ ಸಮೂಹಕ್ಕೆ ಸೇರಿದ ಮಹಿಳಾ ಪ್ರಮುಖರು ಹಾಗೂ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಅವರು ಪಾಲ್ಗೊಂಡಿರುವುದು ಆಶ್ಚರ್ಯವನ್ನುಂಟುಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇಂಧನ ದರ ಹೆಚ್ಚಳದ ಬಿಜೆಪಿ ಪ್ರತಿಭಟನೆಯಲ್ಲಿ ಶಾಸಕರ ಪ್ರತಿಕೃತಿ ದಹನವನ್ನು ಬಿಜೆಪಿ ಪಕ್ಷದಲ್ಲಿರುವವರೆ ಸಾಕಷ್ಟು ಮಂದಿ ಒಪ್ಪಿಲ್ಲ ಮತ್ತು ಅದನ್ನು ಖಂಡಿಸುತ್ತಿದ್ದಾರೆ. ಪ್ರಸ್ತುತ ಬಿಜೆಪಿಯ ಪ್ರತಿಕೃತಿ ದಹನದಿಂದ ವಿರಾಜಪೇಟೆ ಕ್ಷೇತ್ರಕ್ಕೆ ಎ.ಎಸ್.ಪೊನ್ನಣ್ಣ ಅವರನ್ನು ಶಾಸಕರನ್ನಾಗಿ ಆಯ್ಕೆ ಮಾಡಿದ ಜನರಿಗೆ ಅತೀವ ನೋವನ್ನುಂಟುಮಾಡಿದೆ ಎಂದು ಹೇಳಿದರು.
ಈ ಹಿಂದೆ ವಿಧಾನಸಭೆಯ ಸಭಾಧ್ಯಕ್ಷರಾಗಿದ್ದ ಕೆ.ಜಿ.ಬೋಪಯ್ಯ ಹಾಗೂ ಅಪ್ಪಚ್ಚು ರಂಜನ್ ಅವರು ಶಾಸಕರಾಗಿದ್ದ ಸಂದರ್ಭ ಸಾಕಷ್ಟು ಬಾರಿ ಬೆಲೆ ಹೆಚ್ಚಳವಾಗಿದ್ದರು, ಅಂದು ಕಾಂಗ್ರೆಸ್ ಹಾದಿ ಬೀದಿಯಲ್ಲಿ ಬಿಜೆಪಿಯಂತೆ ಪ್ರತಿಕೃತಿ ದಹನಕ್ಕೆ ಮುಂದಾಗಿರಲಿಲ್ಲವೆAದು ಗಮನ ಸೆಳೆದರು. ಜಿಲ್ಲೆಯ ಇಬ್ಬರು ಶಾಸಕರು ಕಳೆದ ತಮ್ಮ ಒಂದು ವರ್ಷದ ಅಧಿಕಾರದ ಅವಧಿಯಲ್ಲಿ ಜನರ ಸಂಕಷ್ಟಗಳಿಗೆ ಸ್ಪಂದಿಸಿ ಜನಪರವಾದ ಕೆಲಸ ಕಾರ್ಯಗಳನ್ನು ನಡೆಸುವ ಮೂಲಕ ಜನಪ್ರಿಯರಾಗಿದ್ದಾರೆ. ಇದನ್ನು ಸಹಿಸಲಾಗದೆ ಅಸೂಯೆಯಿಂದಾಗಿ ಬಿಜೆಪಿ ಇದೀಗ ಇಂತಹ ವರ್ತನೆ ತೋರಿದೆ. ಇನ್ನಾದರು ಬಿಜೆಪಿ ಇಂತಹ ಕೆಟ್ಟ ರಾಜಕೀಯ ಮಾಡುವುದನ್ನು ನಿಲ್ಲಿಸಲಿ ಎಂದು ಒತ್ತಾಯಿಸಿದರು.
Breaking News
- *ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದ ಅರ್ಚಕರ ಮೇಲೆ ಹಲ್ಲೆ : ಕಾಂಗ್ರೆಸ್ ಕಾರ್ಯಕರ್ತ ಅಮಾನತು*
- *ಕಟ್ಟೆಮಾಡು ಗ್ರಾಮದ ಶ್ರೀ ಮಹಾ ಮೃತ್ಯುಂಜಯ ದೇವಸ್ಥಾನದ ಪ್ರಧಾನ ಅರ್ಚಕ ವಿಘ್ನೇಶ್ ಭಟ್ ಮೇಲೆ ಹಲ್ಲೆ*
- *ಸಿಎನ್ಸಿಯಿಂದ ಅಂತರಾಷ್ಟ್ರೀಯ ಹತ್ಯಾಕಾಂಡದ ನೆನಪಿನ ದಿನ ಆಚರಣೆ*
- *ಪದ್ಮಶ್ರೀ ಪುರಸ್ಕೃತ ಡಾ.ವಿಜಯಲಕ್ಷ್ಮಿ ದೇಶಮಾನೆ ಅವರಿಗೆ ಕೊಡಗು ಜಿಲ್ಲಾ ವಿಶ್ವ ಹಿಂದೂ ಪರಿಷದ್, ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಅಭಿನಂದನೆ*
- *‘ಕೃತಕ ಅಂಗಾಂಗಗಳ ಜೋಡಣೆ ಮತ್ತು ಆರೋಗ್ಯ ತಪಾಸಣೆ’ ಶಿಬಿರ : ಬಡವರಿಗೆ ಅಗತ್ಯ ಆರೋಗ್ಯ ಸೌಲಭ್ಯ : ಸಚಿವ ಭೋಸರಾಜು*
- *ರಾಜ್ಯದಲ್ಲೇ ವಿನೂತನ ಪ್ರಯತ್ನ : ‘ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆ’ ಉದ್ಘಾಟನೆ*
- *ಕೆ.ಎಸ್.ದರ್ಶನ್ ಗೆ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿ ಪ್ರದಾನ*
- *ಕಾಲ್ಚೆಂಡು ಪಂದ್ಯಾವಳಿ : ತ್ರಿವೇಣಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಚಾಂಪಿಯನ್*
- *ವಿರಾಜಪೇಟೆ : ವಿವಿಧತೆಯಲ್ಲಿ ಏಕತೆಕಂಡಿರುವ ಸಂವಿಧಾನವನ್ನು ಗೌರವಿಸುವಂತಾಗಬೇಕು : ವಕೀಲ ಪುಷ್ಪರಾಜ್*
- *ಸೋಮವಾರಪೇಟೆ : ಅಗ್ನಿಶಾಮಕ ಠಾಣೆಯ ನೂತನ ಕಟ್ಟಡ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*