
ವಿರಾಜಪೇಟೆ ಜೂ.24 NEWS DESK : ಪಟ್ಟಣದ ಮಗ್ಗುಲ ದಲ್ಲಿರುವ ಲಿಟಲ್ ಸ್ಕಾಲರ್ಸ್ ಶಾಲೆಯಲ್ಲಿ ಸಾರ್ವಜನಿಕ ಸೇವಾ ದಿವಸವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ವಿರಾಜಪೇಟೆ ಪುರಸಭಾ ಸ್ವಚ್ಛತಾ ಸಿಬ್ಬಂದಿಗಳು, ಮಕ್ಕಳಿಗೆ ಕಸ ವಿಂಗಡಣೆ ಮಾಡುವ ವಿಧಾನಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಮಕ್ಕಳು ಅನೇಕ ಪ್ರಶ್ನೆಗಳನ್ನು ಕೇಳುವುದರ ಮೂಲಕ ಮಾಹಿತಿ ಪಡೆದರು.
ಶಾಲಾ ಮುಖ್ಯಸ್ಥರು ಹಾಗೂ ಸಮಾಜ ಸೇವಕರಾದ ಪೂಜಾ ಸಜೇಶ್ ಮಾತನಾಡಿ, ಪಟ್ಟಣದ ಶುಚಿತ್ವದಲ್ಲಿ ಸ್ವಚ್ಛತಾ ಸಿಬ್ಬಂದಿಗಳ ಪಾತ್ರ ಬಹಳಷ್ಟಿದ್ದು ಮಳೆ, ಬಿಸಿಲು ಎನ್ನದೇ ನಿರಂತರ ಸೇವೆಯನ್ನು ಸಲ್ಲಿಸುತ್ತಿರುವುದು ಶ್ಲಾಘನೀಯ ಎಂದರು. ಸ್ವಚ್ಛತಾ ಸಿಬ್ಬಂದಿಗಳ ಜೊತೆಗೆ ಸಂವಹನ ನಡೆಸಿ ಅವರ ಸಮಸ್ಯೆಗಳ ಬಗ್ಗೆ ತಿಳಿದುಕೊಂಡರು.
ಕಾರ್ಯಕ್ರಮದಲ್ಲಿ ವಿರಾಜಪೇಟೆ ಪುರಸಭೆಯ ಸ್ವಚ್ಛತಾ ಸಿಬ್ಬಂದಿಗಳನ್ನು ಶಾಲಾ ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕರಾದ ಮೀರಾ ಪೂಣಚ್ಚ, ಶಿಕ್ಷಕರು, ಸಿಬ್ಬಂದಿಗಳು, ಶಾಲಾ ಮಕ್ಕಳು ಹಾಜರಿದ್ದರು.








