Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಪ್ರವಾಸಿಗರಿಂದ ಮೂಲ ನಿವಾಸಿಗಳ ಮೇಲೆ ದೌರ್ಜನ್ಯ : ಜಬ್ಬೂಮಿ ಸಂಘಟನೆ ಆರೋಪ : ಸೂಕ್ತ ಕ್ರಮಕ್ಕೆ ಆಗ್ರಹ*
ಇತ್ತೀಚಿನ ಸುದ್ದಿಗಳು

*ಪ್ರವಾಸಿಗರಿಂದ ಮೂಲ ನಿವಾಸಿಗಳ ಮೇಲೆ ದೌರ್ಜನ್ಯ : ಜಬ್ಬೂಮಿ ಸಂಘಟನೆ ಆರೋಪ : ಸೂಕ್ತ ಕ್ರಮಕ್ಕೆ ಆಗ್ರಹ*

June 24, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link


ಮಡಿಕೇರಿ ಜೂ.24 NEWS DESK : ಕೊಡಗು ಜಿಲ್ಲೆಗೆ ಆಗಮಿಸುತ್ತಿರುವ ಪ್ರವಾಸಿಗರಿಂದ ಮೂಲ ನಿವಾಸಿಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿರುವ ಜಬ್ಬೂಮಿ ಸಂಘಟನೆಯ ಸಂಚಾಲಕ ಚೊಟ್ಟೇಕ್‍ಮಾಡ ರಾಜೀವ್ ಬೋಪಯ್ಯ ಅವರು, ಪೊಲೀಸ್ ಇಲಾಖೆ ಸೂಕ್ತ ಕಾನೂನು ಕ್ರಮ ಕೈಗೊಳ್ಳದಿದ್ದಲ್ಲಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಡಗಿನಲ್ಲಿ ಪ್ರವಾಸಿಗರ ದೌರ್ಜನ್ಯ ಮಿತಿ ಮೀರುತ್ತಿದೆ, ಇದಕ್ಕೆ ರಾಜಕೀಯ ಮತ್ತು ಕೋಮು ಬಣ್ಣ ಬಳಿಯಲಾಗುತ್ತಿದೆ. ವಿನಾಕಾರಣ ಮಹಿಳಾ ದೌರ್ಜನ್ಯದ ಆರೋಪ ಹೊರಿಸಿ ಸ್ಥಳೀಯ ಮೂಲ ನಿವಾಸಿಗಳ ಆತ್ಮಸ್ಥೈರ್ಯ ಕುಗ್ಗಿಸುವ ಯತ್ನ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.
ಉತ್ತರ ಕೊಡಗಿನ ಮಾದಾಪುರ ಸಮೀಪದ ಕೋಟೆಬೆಟ್ಟದ ತಪ್ಪಲಿನಲ್ಲಿ ಇತ್ತೀಚೆಗೆ ಕ್ಷುಲ್ಲಕ ವಿಚಾರಕ್ಕೆ ಕಲಹ ನಡೆದಿದೆ. ಇದಕ್ಕೆ ಮೊದಲಿಗೆ ರಾಜಕೀಯ ಬಣ್ಣ ಬಳಿಯಲು ಯತ್ನಿಸಿದ್ದು, ನಂತರ ಸ್ಥಳೀಯರಿಂದ ಸರಗಳ್ಳತನ ಎಂದು ಬಿಂಬಿಸಿ, ವೀಡಿಯೋ ಮತ್ತು ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಡಲಾಗಿದೆ.
ಸ್ಥಳೀಯರು ವಾಸ್ತವಾಂಶದ ವಿವರವನ್ನು ಸಾಮಾಜಿಕ ಜಾಲತಾಣದ ಮೂಲಕ ಬಹಿರಂಗ ಪಡಿಸಿದ ನಂತರ, ಪೊಲೀಸ್ ಇಲಾಖೆ ಸರಗಳ್ಳತನದ ಆರೋಪವನ್ನು ನಿರಾಕರಿಸಿ ಹೇಳಿಕೆಯೊಂದನ್ನು ಬಿಡುಗಡೆ ಮಾಡಿತು. ವಾಹನಕ್ಕೆ ದಾರಿ ಕೊಡುವ ವಿಚಾರದಲ್ಲಿ ನಡೆದ ಕಲಹ ಮತ್ತು ಈ ಸಂದರ್ಭ ತಡೆಯಲು ಹೋದ ಯುವತಿಯ ಸರ ಬಿದ್ದು ಹೋಗಿದೆ ಎಂದು ಪತ್ರಿಕಾ ಪ್ರಕಟಣೆ ನೀಡಿತ್ತು.

ಆದರೆ ಇದೀಗ ಪೊಲೀಸರು ಮಹಿಳಾ ದೌರ್ಜನ್ಯದಡಿ ಪ್ರಕರಣ ದಾಖಲಿಸಿರುವ ಕುರಿತು ಮಾಹಿತಿ ಲಭಿಸಿದೆ. ಇಂದು ಮುಂಜಾನೆ ಸ್ಥಳೀಯ ಯುವಕರ ಮನೆಗೆ ತೆರಳಿದ ಪೊಲೀಸರು ಯುವಕರನ್ನು ಹುಡುಕಾಡಿದ್ದಾರೆ. ಕುಟುಂಬಸ್ಥರಲ್ಲಿ ಹಾಗೂ ಗ್ರಾಮದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ ಎಂದು ರಾಜೀವ್ ಬೋಪಯ್ಯ ಆರೋಪಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೇ ಕ್ಷುಲ್ಲಕ ವಿಚಾರದ ಕಲಹವೆಂದು ಸ್ಪಷ್ಟೀಕರಣ ನೀಡಿದ ನಂತರವೂ ಮಹಿಳಾ ದೌರ್ಜನ್ಯದ ಪ್ರಕರಣ ಯಾವ ಕಾರಣಕ್ಕೆ ದಾಖಲಾಗಿದೆ ಎನ್ನುವ ಬಗ್ಗೆ ಪೊಲೀಸ್ ಇಲಾಖೆ ತಿಳಿಸಬೇಕು. ಅಲ್ಲದೆ ಇದೇ ಘಟನೆಗೆ ಸಂಬಂಧಿದಂತೆ ವ್ಯಕ್ತಿಯೊಬ್ಬ ವೀಡಿಯೋ ಮೂಲಕ ಸ್ಥಳೀಯ ಯುವಕರಿಬ್ಬರಿಗೆ ಬೆದರಿಕೆ ಹಾಕಿದ್ದಾನೆ. ಈ ಬೆಳವಣಿಗೆಗಳಿಂದ ಆತಂಕ ಮೂಡಿದ್ದು, ಪೊಲೀಸ್ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಸೂಕ್ತ ತನಿಖೆ ನಡೆಸಬೇಕು. ಆ ಮೂಲಕ ಮೂಲನಿವಾಸಿಗಳ ಆತ್ಮವಿಶ್ವಾಸ ಹೆಚ್ಚಿಸಬೇಕು. ವೀಡಿಯೋದಲ್ಲಿ ಬೆದರಿಕೆ ಹಾಕಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಮೋಜು ಮಸ್ತಿಯ ಹೆಸರಿನಲ್ಲಿ ಜಿಲ್ಲೆಗೆ ಬರುವ ಪ್ರವಾಸಿಗರಿಂದ ನಿಯಮ ಬಾಹಿರ ಚಟುವಟಿಕೆಗಳು ಮತ್ತು ಕೊಡಗಿನ ಪರಿಸರಕ್ಕೆ ಮಾರಕವಾಗುವ ಕಾರ್ಯಗಳು ನಡೆಯುತ್ತಿದೆ. ಇದರ ವಿರುದ್ಧ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಸಂಘಟಿತ ಹೋರಾಟ ಅನಿವಾರ್ಯವಾಗುತ್ತದೆ ಎಂದು ರಾಜೀವ್ ಬೋಪಯ್ಯ ಎಚ್ಚರಿಕೆ ನೀಡಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಜೂ.27 ರಂದು ಅರಮೇರಿ ಕಳಚೇರಿ ಮಠದಲ್ಲಿ ದತ್ತಿ ಉಪನ್ಯಾಸ ಕಾರ್ಯಕ್ರಮ*
Next Article *ಜೂ.25 ರಂದು ವಿದ್ಯುತ್ ವ್ಯತ್ಯಯ*

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.