
ಮಡಿಕೇರಿ ಜೂ.24 NEWS DESK : ಮಡಿಕೇರಿ 66/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್6 ಭಾಗಮಂಡಲ ಫೀಢರ್‍ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ಜೂನ್, 25 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಕೋಪಟ್ಟಿ, ಚೆಟ್ಟಿಮಾನಿ, ಭಾಗಮಂಡಲ, ಅಯ್ಯಂಗೇರಿ, ತಲಕಾವೇರಿ, ಚೇರಂಗಾಲ, ಕೋರಂಗಾಲ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.








