ಮಡಿಕೇರಿ ಜೂ.24 NEWS DESK : ಜಿಲ್ಲೆಯ ಇಬ್ಬರು ಶಾಸಕರು ಕೇವಲ ಒಂದು ವರ್ಷದಲ್ಲಿ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ 200 ಕೋಟಿ ರೂ.ಗೂ ಅಧಿಕ ಮೊತ್ತದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಜನಸ್ನೇಹಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಬಿಜೆಪಿಯ ‘ಅಭಿವೃದ್ಧಿ ಶೂನ್ಯ’ ಟೀಕೆ ಅರ್ಥಹೀನವೆಂದು ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಪ್ರತಿಭಟನೆಯ ಸಂದರ್ಭ ಶಾಸಕ ಎ.ಎಸ್.ಪೊನ್ನಣ್ಣ ಅವರ ಪ್ರತಿಕೃತಿ ದಹಿಸಿರುವುದು ಬೇಸರದ ವಿಚಾರ. ಆರ್ಥಿಕ ಕ್ರೋಢೀಕರಣಕ್ಕೆ ಯಾವುದೇ ಸರ್ಕಾರಗಳು ಅಧಿಕಾರಕ್ಕೆ ಬಂದಾಗ ದರ ಹೆಚ್ಚಳ ಮಾಡುವುದು ಸರ್ವೇ ಸಾಮಾನ್ಯವೆಂದು ಅಭಿಪ್ರಾಯಪಟ್ಟರು.
ಚುನಾವಣೆ ಸಮೀಪಿಸುತ್ತಿರುವ ಹಂತಗಳಲ್ಲಿಯೂ ಇಂಧನ ದರ ಹೆಚ್ಚಳ ನಡೆದಿದೆ. ಕೇಂದ್ರ ಸರ್ಕಾರ ಸುಮಾರು 70 ರೂ. ಇದ್ದ ಇಂಧನ ದರ 100 ರೂ.ಗಳ ಗಡಿ ದಾಟಿಸಿದ ಹಂತದಲ್ಲಿಯೂ ಕಾಂಗ್ರೆಸ್ ಪಕ್ಷ ಪ್ರತಿಕೃತಿ ದಹಿಸುವಂತಹ ಕಾರ್ಯಕ್ಕೆ ಮುಂದಾಗಿಲ್ಲವೆAದು ಸ್ಪಷ್ಟಪಡಿಸಿದರು.
ಜಿಲ್ಲೆಯ ನೂತನ ಶಾಸಕರಿಂದ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲವೆನ್ನುವ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಜಿಲ್ಲೆಯ ಇಬ್ಬರು ಶಾಸಕರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜನರ ಬೇಕು ಬೇಡಿಕೆಗಳಿಗೆ ಸ್ಪಂದಿಸುತ್ತಿದ್ದಾರೆ. ಉದಾಹರಣೆಯಾಗಿ ತೆಗೆದುಕೊಳ್ಳುವುದಾದರೆ ಮದೆನಾಡು ವಿಭಾಗದಲ್ಲಿ ಈ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದ ಸಂದರ್ಭ ರಸ್ತೆ ಕಾಮಗಾರಿಗೆ ನಾಲ್ಕು ಬಾರಿ ಭೂಮಿಪೂಜೆ ನಡೆದಿದ್ದರು ಕಾಮಗಾರಿ ಆರಂಭಗೊAಡಿರಲಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ 68 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಕಾಮಗಾರಿ ನಡೆದಿರುವುದಾಗಿ ತಿಳಿಸಿದರು.
ಭಾಗಮಂಡಲ ಮೇಲುಸೇತುವೆ ಆರಂಭಕ್ಕೆ ಕಾರಣರಾದವರು ಮತ್ತು ಅದಕ್ಕೆ ಅಗತ್ಯ ನೆರವು ಒದಗಿಸಿದವರು ಅಂದು ಸಚಿವರಾಗಿದ್ದ ಕೆ.ಜೆ.ಜಾರ್ಜ್ ಅವರು. ಯಾವುದೇ ಅಭಿವೃದ್ಧಿ ಕಾರ್ಯ ಪೂರ್ಣಗೊಂಡ ಹಂತದಲ್ಲಿ ಯಾರು ಅಧಿಕಾರದಲ್ಲಿ ಇರುತ್ತಾರೋ ಅವರು ಅದರ ಉದ್ಘಾಟನೆ ಮಾಡುವುದು ಸಾಮಾನ್ಯವೆಂದರು. ಶಾಸಕರ ಪ್ರತಿಕೃತಿ ದಹಿಸಿದವರಿಗೆ ಒಳ್ಳೆಯ ಬುದ್ಧಿ ನೀಡುವಂತೆ ಭಾಗಮಂಡಲದಲ್ಲಿ ಕಾಂಗ್ರೆಸ್ ವತಿಯಿಂದ ವಿಶೇಷ ಪೂಜೆ ಸಲ್ಲಿಸಿರುವುದಾಗಿ ಕೊಲ್ಯದ ಗಿರೀಶ್ ಇದೇ ಸಂದರ್ಭ ತಿಳಿಸಿದರು. ಕಾಂಗ್ರೆಸ್ ವೃತ್ತಿ ಘಟಕದ ಅಧ್ಯಕ್ಷ ನವೀನ್ ಅಂಬೆಕಲ್ಲು ಅವರು ಮಾತನಾಡಿ, ಕಾಂಗ್ರೆಸ್‌ನಿAದ ಅಭಿವೃದ್ಧಿ ಕಾರ್ಯ ನಡೆದಿಲ್ಲ ಎಂದು ಆರೋಪಿಸುವ ಬಿಜೆಪಿಯೊಂದಿಗೆ ಬಹಿರಂಗ ಚರ್ಚೆಗೆ ಕಾಂಗ್ರೆಸ್ ಸಿದ್ಧವಿದೆ ಎಂದರು.
ವಿರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಪ್ರಮುಖ ಸುರೇಶ್ ಸಂಪಾಜೆ ಮಾತನಾಡಿ, ಇಬ್ಬರು ಶಾಸಕರ ಅಭಿವೃದ್ಧಿ ಕಾರ್ಯ ಮತ್ತು ಜನಪ್ರಿಯತೆಯನ್ನು ಸಹಿಸದ ಬಿಜೆಪಿಗರು ಪ್ರತಿಕೃತಿ ದಹನ ಮಾಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಮಡಿಕೇರಿ ತಾಲ್ಲೂಕು ಅಧ್ಯಕ್ಷ ಮಂದ್ರಿರ ಮೋಹನ್ ದಾಸ್ ಹಾಗೂ ಸಾಮಾಜಿಕ ಜಾಲತಾಣ ಘಟಕದ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು ಉಪಸ್ಥಿತರಿದ್ದರು.








