ಕುಶಾಲನಗರ ಜೂ.25 NEWS DESK : ಅಖಿಲ ಭಾರತ ವೀರಶೈವ ಮಹಾಸಭಾ ಕೊಡಗು ಜಿಲ್ಲಾ, ತಾಲೂಕು ಮಟ್ಟದ ಆಡಳಿತ ಮಂಡಳಿಗೆ ಚುನಾವಣೆಗೆ ವೇಳಾಪಟ್ಟಿ ನಿಗದಿಪಡಿಸಲಾಗಿದೆ ಎಂದು ಜಿಲ್ಲಾ ಘಟಕದ ಚುನಾವಣಾ ಅಧಿಕಾರಿ ಎಸ್.ಆರ್.ಜಿತೇಂದ್ರ ತಿಳಿಸಿದ್ದಾರೆ.
ಕುಶಾಲನಗರ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು ಅಖಿಲ ಭಾರತ ವೀರಶೈವ ಮಹಾಸಭಾ ಮೊದಲನೇ ಹಂತದ ಚುನಾವಣೆ ತಾಲೂಕು ಮತ್ತು ಜಿಲ್ಲಾ ಘಟಕಗಳಿಗೆ ನಡೆಯಲಿದೆ. ಚುನಾವಣೆ ಮೂಲಕ ಅಧ್ಯಕ್ಷರು ಮತ್ತು ಕಾರ್ಯಕಾರಿ ಮಂಡಳಿ ಸದಸ್ಯರ ಆಯ್ಕೆ ನಡೆಯುವುದು ಎಂದು ತಿಳಿಸಿದ್ದಾರೆ.
ನಾಮಪತ್ರ ಸ್ವೀಕಾರ ಈ ತಿಂಗಳ 27 ರಿಂದ ಆರಂಭವಾಗುವುದು. ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಜು.4 ಆಗಿರುತ್ತದೆ ಎಂದು ಹೇಳಿದ್ದಾರೆ.
ಜು.5 ನಾಮಪತ್ರ ಪರಿಶೀಲನೆ, ಜು.8 ರಂದು ನಾಮಪತ್ರಗಳನ್ನು ಹಿಂಪಡೆಯಲು ಕೊನೆ ದಿನಾಂಕವಾಗಿದೆ. ಜು.21ರಂದು ಮತದಾನ ಪ್ರಕ್ರಿಯೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ.
ಮತದಾನದ ನಂತರ ಮತಗಳ ಎಣಿಕೆ ನಡೆದು ಫಲಿತಾಂಶ ಪ್ರಕಟಣೆ ಆಗಲಿದೆ ಎಂದು ಅವರು ಮಾಹಿತಿ ಒದಗಿಸಿದರು.
ಹೆಚ್ಚಿನ ಮಾಹಿತಿಗೆ ಕುಶಾಲನಗರ ಬಸವೇಶ್ವರ ಸೌಹಾರ್ದ ಸಹಕಾರ ಸಂಘದ ಕಚೇರಿಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಅಧ್ಯಕ್ಷರಾದ ಹೆಚ್.ವಿ.ಶಿವಪ್ಪ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿಎಸ್ ಶಾಂಭಶಿವಯ್ಯ ಇದ್ದರು.