ಮಡಿಕೇರಿ ಜೂ.25 NEWS DESK : ಕಾಂಗ್ರೆಸ್ ಶಾಸಕರ ಕುಮ್ಮಕ್ಕಿನಿಂದ ಬಿಜೆಪಿ ಕಾರ್ಯಕರ್ತರ ವಿರುದ್ಧ ವಿನಾಕಾರಣ ಪ್ರಕರಣ ದಾಖಲಿಸಿದರೆ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಮಹೇಶ್ ತಿಮ್ಮಯ್ಯ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತ ಪಕ್ಷದ ವಿರುದ್ಧ ಪ್ರತಿಭಟಿಸುವ ಹಕ್ಕು ವಿರೋಧ ಪಕ್ಷಗಳಿಗಿದೆ. ಆದರೆ ಜಿಲ್ಲೆಯ ಕಾಂಗ್ರೆಸ್ಸಿಗರು ಪ್ರತಿಭಟನೆ ನಡೆಸುವವರ ವಿರುದ್ಧ ಸುಳ್ಳು ದೂರು ದಾಖಲಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಆದರೆ ವಿರಾಜಪೇಟೆಯಲ್ಲಿ ಸಾರ್ವಜನಿಕರ ಆಸ್ತಿಗೆ ಹಾನಿ ಮಾಡಲಾಗಿದೆ ಎಂದು ಸುಳ್ಳು ದೂರು ನೀಡಿ ಬಿಜೆಪಿಯ ನಾಯಕರು ಹಾಗೂ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿರುವುದು ಖಂಡನೀಯ ಎಂದರು.
ದುರಾಡಳಿತ, ಭ್ರಷ್ಟಾಚಾರ, ಆಡಳಿತ ವೈಫಲ್ಯ, ಅಭಿವೃದ್ಧಿ ಶೂನ್ಯ ವ್ಯವಸ್ಥೆಯನ್ನು ಮುಚ್ಚಿ ಹಾಕಿ ಜನರ ಹಾದಿ ತಪ್ಪಿಸುವ ಪ್ರಯತ್ನ ನಡೆಯುತ್ತಿದೆ. ವಿರೋಧ ಪಕ್ಷದ ಹೋರಾಟವನ್ನು ಹತ್ತಿಕ್ಕಲು ಮತ್ತು ಬಿಜೆಪಿ ಕಾರ್ಯಕರ್ತರ ಆತ್ಮಸ್ಥೈರ್ಯ ಕುಗ್ಗಿಸಲು ದೂರು ದಾಖಲಿಸಲಾಗುತ್ತಿದೆ. ಇದು ಹೀಗೆ ಮುಂದುವರೆದರೆ ಜಿಲ್ಲಾವ್ಯಾಪಿ ಯುವ ಮೋರ್ಚಾದಿಂದ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.
ಹಿಂದೆ ವಿಧಾನಸಭಾಧ್ಯಕ್ಷರಾಗಿದ್ದ ಕೆ.ಜಿ.ಬೋಪಯ್ಯ ಹಾಗೂ ಕ್ರೀಡಾ ಸಚಿವರಾಗಿದ್ದ ಅಪ್ಪಚ್ಚು ರಂಜನ್ ಅವರ ಪ್ರತಿಕೃತಿಯನ್ನು ಕಾಂಗ್ರೆಸ್ಸಿಗರು ದಹಿಸಿದ್ದಾರೆ. ವಿರೋಧ ಪಕ್ಷದ ಪ್ರತಿಭಟಿಸುವ ಸ್ವತಂತ್ರವನ್ನು ಗೌರವಿಸಿದ್ದ ಅಂದಿನ ಬಿಜೆಪಿ ಸರ್ಕಾರ ಪ್ರತಿಭಟನಾಕಾರರ ವಿರುದ್ಧ ಯಾವುದೇ ರೀತಿಯ ಮೊಕದ್ದಮೆ ದಾಖಲಿಸಿರಲಿಲ್ಲ ಎಂದರು.
ಯುವ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಚಿಮಂಡ ಪ್ರಸಾದ್ ಚಂಗಪ್ಪ ಮಾತನಾಡಿ, ಬಿಜೆಪಿ ಕಾರ್ಯಕರ್ತರು ದೂರು ನೀಡಿದರೆ ಪ್ರಕರಣ ದಾಖಲಿಸುತ್ತಿಲ್ಲ. ಆದರೆ ಬಿಜೆಪಿಯವರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.
ಕೊಡಗಿನಲ್ಲಿ ಎಲ್ಲಾ ಸಮುದಾಯದವರು ಶಾಂತಿಯುತವಾಗಿ ಒಗ್ಗಟ್ಟಿನಿಂದ ಜೀವನ ಸಾಗಿಸುತ್ತಿದ್ದಾರೆ. ಕೇವಲ ಪ್ರತಿಕೃತಿ ದಹನದ ವಿಚಾರವನ್ನು ಮುಂದಿಟ್ಟುಕೊಂಡು ರಾಜಕೀಯವಾಗಿ ಒಂದು ಸಮುದಾಯವನ್ನು ಎಳೆದು ತರುವುದು ಖಂಡನೀಯ ಎಂದರು.
ಸಮಾಜವನ್ನು ರಾಜಕೀಯವಾಗಿ ಬಳಸಿಕೊಳ್ಳದೆ ಅಭಿವೃದ್ಧಿ ಬಗ್ಗೆ ಗಮನ ಹರಿಸಲಿ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಯುವ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪೊನ್ನಚೆಟ್ಟೀರ ವಿನೋದ್, ಮಡಿಕೇರಿ ಗ್ರಾಮಾಂತರ ಅಧ್ಯಕ್ಷ ಚೇತನ್ ಬಂಗೇರ ಹಾಗೂ ಮಡಿಕೇರಿ ನಗರಾಧ್ಯಕ್ಷ ಪಾಂಡೀರ ಪೂಣಚ್ಚ ಉಪಸ್ಥಿತರಿದ್ದರು.
Breaking News
- *ಬಾಳುಗೋಡುವಿನಲ್ಲಿ ಸಂಭ್ರಮದ ಕೊಡವ ನಮ್ಮೆ : ಕೊಡವ ಸಂಸ್ಕೃತಿ, ಪರಂಪರೆಗಳ ಉಳಿವಿಗೆ ಶ್ರಮಿಸಿ : ಶಾಸಕ ಎ.ಎಸ್.ಪೊನ್ನಣ್ಣ*
- *ವಿರಾಜಪೇಟೆಯಲ್ಲಿ ಶಾಸಕರಿಂದ ಕೃಷಿ ಯಂತ್ರೋಪಕರಣ ವಿತರಣೆ*
- *ಮಡಿಕೇರಿ : ನ್ಯುಮೋನಿಯಾ ಯಶಸ್ವಿಯಾಗಿ ಕೊನೆಗೊಳಿಸಲು ಸಾಮಾಜಿಕ ಜಾಗೃತಿ ಅಭಿಯಾನ*
- *ಕೊಡಗು : ಪ್ರಧಾನಮಂತ್ರಿ 15 ಅಂಶದ ಕಾರ್ಯಕ್ರಮ ಪ್ರಗತಿ ಸಾಧಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
- *ಕೊಡಗು : ಶಿಶು ಮರಣ ತಡೆಯಲು ಹೆಚ್ಚಿನ ಜಾಗೃತಿ ಮೂಡಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚನೆ*
- *ಮಡಿಕೇರಿಯ ಹೃದಯ ಭಾಗದಲ್ಲಿ ವಾಣಿಜ್ಯ ಸಂಕೀರ್ಣ ಮಾರಾಟಕ್ಕಿದೆ*
- *ನ.30 ರಂದು ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಕೊಡಗು ಜಿಲ್ಲಾ ಪ್ರವಾಸ*
- *ಜಾರ್ಖಂಡ್ನ 14ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕಾರ*
- *ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು*
- *TO LET / ಬಾಡಿಗೆಗೆ*