Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದ ಸಿಹಿ-ತಂಪುಪಾನೀಯ ವಿತರಣೆ*
  • *ಶಿರಂಗಾಲ ಗ್ರಾಮದಲ್ಲಿ ಮಕ್ಕಳಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ*
  • *ಸರ್ವದೈವತ ಪ್ರೌಢಶಾಲಾ ವಿದ್ಯಾರ್ಥಿನಿಯರು ವಾಲಿಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*
  • *ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಪೊನ್ನಣ್ಣ ಭೇಟಿ*
  • *ಕೊಡಗಿನಲ್ಲಿ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರದ ಆದ್ಯತೆ : ಶಾಸಕ ಪೊನ್ನಣ್ಣ*
  • *ಸಂಪಾಜೆ: ದಿವಂಗತ ಕೆದಂಬಾಡಿ ಜಗದೀಶ್ ಮನೆಗೆ ಶಾಸಕ ಪೊನ್ನಣ್ಣ ಭೇಟಿ*
  • *2 ಲೀಟರ್‌ಗಿಂತ ಕಡಿಮೆ ಸಾಮರ್ಥ್ಯದ ನೀರಿನ ಬಾಟಲ್‌ಗಳ ನಿಷೇಧ : ವಿರಾಜಪೇಟೆ ಪುರಸಭೆಯ ನಿರ್ಧಾರಕ್ಕೆ ಸಾರ್ವಜನಿಕರ ಆಕ್ಷೇಪ*
  • *ಪ್ರಜಾಪ್ರಭುತ್ವ ಬಲಪಡಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*
  • *ಸುಂಟಿಕೊಪ್ಪ: ವಿವಿಧೆಡೆ ಶ್ರದ್ಧಾಭಕ್ತಿಯಿಂದ ನಡೆದ ಗೌರಿ ಗಣೇಶೋತ್ಸವ*
  • *ಕೊಡಗು ವಿದ್ಯಾ ಇಲಾಖಾ ನೌಕರರ ಸೌಹಾರ್ದ ಸಹಕಾರಿ ಸಂಘಕ್ಕೆ 54.60 ರೂ. ಲಕ್ಷ ನಿವ್ವಳ ಲಾಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೆಂಪೇಗೌಡರ ಜಯಂತಿ ಪೂರ್ವಭಾವಿ ಸಭೆ : ಶಾಲಾ-ಕಾಲೇಜುಗಳಲ್ಲಿ ಪ್ರಬಂಧ, ಚಿತ್ರಕಲೆ ಸ್ಪರ್ಧೆ ನಡೆಸಲು ಜಿಲ್ಲಾಧಿಕಾರಿ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೆಂಪೇಗೌಡರ ಜಯಂತಿ ಪೂರ್ವಭಾವಿ ಸಭೆ : ಶಾಲಾ-ಕಾಲೇಜುಗಳಲ್ಲಿ ಪ್ರಬಂಧ, ಚಿತ್ರಕಲೆ ಸ್ಪರ್ಧೆ ನಡೆಸಲು ಜಿಲ್ಲಾಧಿಕಾರಿ ಸೂಚನೆ*

ಜೂನ್ 25, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.25 NEWS DESK : ನಾಡಪ್ರಭು, ಆದರ್ಶ ಆಡಳಿತಗಾರ ಕೆಂಪೇಗೌಡರ ಜಯಂತಿಯನ್ನು ಜೂ.27 ರಂದು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಅರ್ಥಪೂರ್ಣವಾಗಿ ಆಯೋಜಿಸಬೇಕಿದ್ದು, ಆ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಪ್ರಬಂಧ ಸ್ಪರ್ಧೆ ಹಾಗೂ ಚಿತ್ರಕಲೆ ಸ್ಪರ್ಧೆ ಏರ್ಪಡಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಸಂಬಂಧ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರ ಈ ಬಾರಿ ಕೆಂಪೇಗೌಡರ ಆಡಳಿತ ಹಾಗೂ ಅವರ ಜೀವನ ಚರಿತ್ರೆಯನ್ನು ಪರಿಚಯಿಸುವ ನಿಟ್ಟಿನಲ್ಲಿ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲು ನಿರ್ಧರಿಸಿದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳಲ್ಲಿ ಕೆಂಪೇಗೌಡರ ಆಡಳಿತ ವ್ಯವಸ್ಥೆಯನ್ನು ಪರಿಚಯಿಸಲು ಶಾಲಾ ಕಾಲೇಜು ಹಂತದಲ್ಲಿ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಿ, ವರದಿ ನೀಡುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ತಾಲ್ಲೂಕು ಮಟ್ಟದಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ಮೂವರನ್ನು ಜಿಲ್ಲಾ ಮಟ್ಟಕ್ಕೆ ಕಳುಹಿಸಿ ಕೊಡುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ನಿರ್ದೇಶನ ನೀಡಿದರು.
ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಕಾರ್ಯಕ್ರಮ ಆಯೋಜನೆ ಸಂಬಂಧ ದಾಖಲಿಸುವಂತೆ ಅವರು ಸಲಹೆ ನೀಡಿದರು.
ಸ್ಥಳೀಯ ಸಂಸ್ಥೆಗಳು ತಾಲ್ಲೂಕು ಹಾಗೂ ಜಿಲ್ಲಾಡಳಿತದ ಜೊತೆ ಕಾರ್ಯಕ್ರಮ ಯಶಸ್ವಿಗೆ ಕೈಜೋಡಿಸುವಂತೆ ಸೂಚಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಮಾತನಾಡಿ, ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸುವಲ್ಲಿ ಪ್ರತಿಯೊಬ್ಬರೂ ಕೈಜೋಡಿಸುವಂತೆ ಸೂಚಿಸಿದರು.
ಕೊಡಗು ಗೌಡ ವಿದ್ಯಾಸಂಘದ ಅಧ್ಯಕ್ಷ ಅಂಬೆಕಲ್ಲು ನವೀನ್, ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ಕಾರ್ಯದರ್ಶಿ ಎಸ್.ಎಲ್.ಬಸವರಾಜು ಮಾತನಾಡಿ ಕೆಂಪೇಗೌಡ ದಿನಾಚರಣೆಗೆ ಅಗತ್ಯ ಸಹಕಾರ ನೀಡಲಾಗುವುದು ಎಂದು ಹೇಳಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪುಟ್ಟರಾಜು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ರಂಗಧಾಮಪ್ಪ ಕೆಂಪೇಗೌಡ ಜಯಂತಿ ಆಚರಣೆ ಸಂಬಂಧ ಪ್ರಬಂಧ ಸ್ಪರ್ಧೆ ಹಾಗೂ ಚಿತ್ರಕಲಾ ಸ್ಪರ್ಧೆ ಏರ್ಪಡಿಸಿ ಆಯ್ಕೆ ಮಾಡಿ ವರದಿ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಜಿ.ಪಂ.ಉಪ ಕಾರ್ಯದರ್ಶಿ ಎಸ್.ಧನರಾಜ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಿ.ಬಸಪ್ಪ, ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಬಾಲಸುಬ್ರಮಣ್ಯ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಲಿಂಗರಾಜು ದೊಡ್ಡಮನಿ, ಜಿ.ಪಂ.ಎಂಜಿನಿಯರ್ ಮುತ್ತುರಾಜ್, ಸುರೇಶ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಟರಾಜು, ಪಿಎಂಜಿಎಸ್‍ವೈ ಎಂಜಿನಿಯರ್ ಪ್ರಭು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ವಿಕಲಚೇತನರ ಅಧಿಕಾರಿ ವಿಮಲ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೇದ್, ಶಿಕ್ಷಣಾಧಿಕಾರಿ ಕೃಷ್ಣಪ್ಪ, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ದಿವಾಕರ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದ ಸಿಹಿ-ತಂಪುಪಾನೀಯ ವಿತರಣೆ*

ಸೆಪ್ಟೆಂಬರ್ 15, 2026

*ಶಿರಂಗಾಲ ಗ್ರಾಮದಲ್ಲಿ ಮಕ್ಕಳಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ*

ಸೆಪ್ಟೆಂಬರ್ 15, 2026

*ಸರ್ವದೈವತ ಪ್ರೌಢಶಾಲಾ ವಿದ್ಯಾರ್ಥಿನಿಯರು ವಾಲಿಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 15, 2026

*ಶಿರಂಗಾಲ ಗ್ರಾಮದಲ್ಲಿ ಮಕ್ಕಳಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ*

ಸೆಪ್ಟೆಂಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ಸೆ.15: ಕುಶಾಲನಗರ ತಾಲ್ಲೂಕಿನ ಶಿರಂಗಾಲ ಗ್ರಾಮದ ಕೋಟೆಯ ಎಸ್.ಆರ್. ಶಿವಪ್ರಸಾದ್ ಅವರ ಮನೆಯಲ್ಲಿ ಮಕ್ಕಳಾದ ಎಸ್.…

*ಸರ್ವದೈವತ ಪ್ರೌಢಶಾಲಾ ವಿದ್ಯಾರ್ಥಿನಿಯರು ವಾಲಿಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 15, 2026

*ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಪೊನ್ನಣ್ಣ ಭೇಟಿ*

ಸೆಪ್ಟೆಂಬರ್ 15, 2026

*ಕೊಡಗಿನಲ್ಲಿ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರದ ಆದ್ಯತೆ : ಶಾಸಕ ಪೊನ್ನಣ್ಣ*

ಸೆಪ್ಟೆಂಬರ್ 15, 2026

*ಸಂಪಾಜೆ: ದಿವಂಗತ ಕೆದಂಬಾಡಿ ಜಗದೀಶ್ ಮನೆಗೆ ಶಾಸಕ ಪೊನ್ನಣ್ಣ ಭೇಟಿ*

ಸೆಪ್ಟೆಂಬರ್ 15, 2026

*2 ಲೀಟರ್‌ಗಿಂತ ಕಡಿಮೆ ಸಾಮರ್ಥ್ಯದ ನೀರಿನ ಬಾಟಲ್‌ಗಳ ನಿಷೇಧ : ವಿರಾಜಪೇಟೆ ಪುರಸಭೆಯ ನಿರ್ಧಾರಕ್ಕೆ ಸಾರ್ವಜನಿಕರ ಆಕ್ಷೇಪ*

ಸೆಪ್ಟೆಂಬರ್ 15, 2026

*ಪ್ರಜಾಪ್ರಭುತ್ವ ಬಲಪಡಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*

ಸೆಪ್ಟೆಂಬರ್ 15, 2026

*ಸುಂಟಿಕೊಪ್ಪ: ವಿವಿಧೆಡೆ ಶ್ರದ್ಧಾಭಕ್ತಿಯಿಂದ ನಡೆದ ಗೌರಿ ಗಣೇಶೋತ್ಸವ*

ಸೆಪ್ಟೆಂಬರ್ 15, 2026

*ಕೊಡಗು ವಿದ್ಯಾ ಇಲಾಖಾ ನೌಕರರ ಸೌಹಾರ್ದ ಸಹಕಾರಿ ಸಂಘಕ್ಕೆ 54.60 ರೂ. ಲಕ್ಷ ನಿವ್ವಳ ಲಾಭ*

ಸೆಪ್ಟೆಂಬರ್ 15, 2026

*ನಾವು ಯಾವುದೇ ಸಮುದಾಯದ ವಿರೋಧಿಗಳಲ್ಲ : ಕೊಡಗು ಗೌಡ ಸಮಾಜಗಳ ಒಕ್ಕೂಟ ಸ್ಪಷ್ಟನೆ*

ಸೆಪ್ಟೆಂಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.