ಮಡಿಕೇರಿ ಜೂ.25 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಒಕ್ಕಲಿಗರ ಸಂಘ ಮತ್ತು ಕೊಡಗು ಗೌಡ ಸಮಾಜಗಳ ಸಹಕಾರದೊಂದಿಗೆ ನಾಡಪ್ರಭು, ಆದರ್ಶ ಆಡಳಿತಗಾರ ಕೆಂಪೇಗೌಡರ ಜಯಂತಿಯು ಜೂನ್, 27 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಬೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಮತ್ತು ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ,
ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಹರಪಳ್ಳಿ ರವೀಂದ್ರ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಎಸ್.ಎಂ.ಚಂಗಪ್ಪ, ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಆರ್.ಸೋಮಣ್ಣ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಇತರರು ಪಾಲ್ಗೊಳ್ಳಲಿದ್ದಾರೆ. ಗೌಡ ಸಮಾಜಗಳ ಒಕ್ಕೂಟದ ನಿರ್ದೇಶಕರಾದ ಕುಯ್ಯಮುಡಿ ಅಶ್ವಿನಿಕುಮಾರ್ ಅವರು ಉಪನ್ಯಾಸ ನೀಡಲಿದ್ದಾರೆ.