ವಿರಾಜಪೇಟೆ ಜೂ.25 NEWS DESK : ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ವಿರಾಜಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯ ಸಂದರ್ಭ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಪ್ರತಿಕೃತಿ ದಹನ ಮತ್ತು ಅಣುಕು ಶವ ಯಾತ್ರೆ ನಡೆಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಶಾಸಕ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಪಟ್ಟಣದ ಶ್ರೀ ಮಹಾಗಣಪತಿ ದೇವಾಲಯದಲ್ಲಿ ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರು ಶಾಸಕ ಎ.ಎಸ್.ಪೊನ್ನಣ್ಣ ಅವರ ಆಯುಷ್ಯ, ಆರೋಗ್ಯ ವೃದ್ಧಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭ ವಕೀಲರು ಮತ್ತು ಮುಖಂಡರಾದ ಎನ್.ನರೇಂದ್ರ ಕಾಮತ್, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಪುರಸಭೆ ಸದಸ್ಯರಾದ ರಾಜೇಶ್ ಪದ್ಮನಾಭ, ರಜನಿಕಾಂತ್, ಪುರಸಭೆ ನಾಮನಿರ್ದೇಶಿತ ಸದಸ್ಯರಾದ ಶಭರಿಶ್ ಶೆಟ್ಟಿ, ರವಿ, ದಿನೇಶ್, ಮಾದಂಡ ಪೂವಯ್ಯ, ಘಟಕದ ಪೊನ್ನಕ್ಕಿ, ಉದ್ಯಮಿಗಳಾದ ವಿಕ್ರಂ ಚೆಂಗಪ್ಪ, ಜಗತ್, ಶೃಂಗಾ, ಸೋಮಣ್ಣ, ಮಂಜು, ಶಶಿ, ರಕ್ಷೀತ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.