ಸುಂಟಿಕೊಪ್ಪ ಜೂ.26 NEWS DESK : ಶಾಲಾ ಸಂಸತ್ ರಚನೆಯಿಂದ ಶಾಲೆಗೆ ಬೇಕಾಗುವ ಮೂಲಭೂತ ಸೌಕರ್ಯಗಳನ್ನು ಪಡೆದುಕೊಳ್ಳಲು ಸಹಕಾರಿಯಾಗಲಿದೆ ಎಂದು ಸುಂಟಿಕೊಪ್ಪ ಗ್ರೇಡ್ 1 ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನಿಲ್ ಕುಮಾರ್ ಹೇಳಿದರು.
ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ನಡೆದ ಸರಕಾರಿ ಪ್ರೌಢಶಾಲಾ ಶಾಲಾ ಸಂಸತ್ ರಚನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ
ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ಇರುವ ಹಿನ್ನಲೆಯಲ್ಲಿ ಮಕ್ಕಳು ಶಾಲಾ ಕಾಲೇಜು ದಿನಗಳಿಂದಲೇ ಪ್ರಜಾಪ್ರಭುತ್ವ ವ್ಯವಸ್ಥೆಯ ಅಡಿಪಾಯ ಮತ್ತು ವ್ಯವಸ್ಥೆ ಯ ಕುರಿತು ಜ್ಞಾನ ಹೊಂದಲು ಶಾಲಾ ಸಂಸತ್ ತುಂಬಾ ಸಹಕಾರಿಯಾಗಿದೆ ಎಂದರು.
ಸರಕಾರಿ ಶಾಲೆಗೆ ಮಕ್ಕಳನ್ನು ಕಳುಹಿಸುವ ಮೂಲಕ ಸರಕಾರಿ ಶಾಲೆಗಳ ಉಳಿವಿಕೆಗೆ ಕೈಜೋಡಿಸಿದ ಬಗ್ಗೆ ಅಭಿನಂದಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಸಿರಿಲ್ ರಾಡ್ರಿಗಸ್ ವಹಿಸಿದ್ದರು.
ಉಪಪ್ರಾಂಶುಪಾಲ ಬಾಲಕೃಷ್ಣ ನೂತನ ಸಂಸತ್ ಪದಾಧಿಕಾರಿಗಳಿಗೆ ಪ್ರಮಾಣ ವಚನ ಭೋದಿಸಿದರು.
ವೇದಿಕೆಯಲ್ಲಿ ಗ್ರಾ.ಪಂ ಸದಸ್ಯರುಗಳಾದ ಪ್ರಸಾದ್ ಕುಟ್ಟಪ್ಪ, ಆಲಿಕುಟ್ಟಿ, ಶಬ್ಬೀರ್, ರಫೀಕ್ ಖಾನ್, ಸೋಮನಾಥ್, ಕೊಡಗು ಜಿಲ್ಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ.ಸೋಮಶೇಖರ್, ಸಮೂಹ ಸಂಪನ್ಮೂಲ ವ್ಯಕ್ತಿ ಸೀಮಾ, ಸುಂಟಿಕೊಪ್ಪ ಜೆಸಿಐ ಸಂಸ್ಥೆಯ ಅದ್ಯಕ್ಷ ಸಂಪತ್ ಕುಮಾರ್ ಹಾಗೂ ಸಹ ಶಿಕ್ಷಕರು ಇದ್ದರು.