ಮಡಿಕೇರಿ ಜೂ.26 NEWS DESK : ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮಾದಕ ದ್ರವ್ಯ ವಿರೋಧಿ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ನಗರದ ಹಾಲ್‍ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಉದ್ಘಾಟಿಸಿ, ಮಾತನಾಡಿ ಯುವಕರು ದುಶ್ಚಟಗಳಿಂದ ದೂರವಿರಬೇಕು. ವಿದ್ಯಾರ್ಥಿಗಳು, ಮಾದಕ ದ್ರವ್ಯ ಸೇವನೆ ಮಾಡದಂತೆ ಜನರಿಗೆ ತಿಳಿವಳಿಕೆ ನೀಡಬೇಕು ಎಂದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಪುಟ್ಟರಾಜು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರಾದ ರಂಗಧಾಮಪ್ಪ, ನಗರಸಭೆ ಪೌರಾಯುಕ್ತ ವಿಜಯ್ ಹಾಗೂ ಇತರರು ಇದ್ದರು.
ಸಭಾ ಕಾರ್ಯಕ್ರಮಕ್ಕೂ ಮೊದಲು ನಗರದ ಜನರಲ್ ತಿಮ್ಮಯ್ಯ ವೃತ್ತದಿಂದ ಹೊರಟು ಮಂಗೇರಿರ ಮುತ್ತಣ್ಣ ವೃತ್ತ, ಅಜ್ಜಮಾಡ ದೇವಯ್ಯ ವೃತ್ತ, ಇಂದಿರಾಗಾಂಧಿ ವೃತ್ತ ಹಾಗೂ ಕಾಲೇಜು ರಸ್ತೆ ಮೂಲಕ ಜಾಗೃತಿ ಜಾಥಾ ಹೊರಟು ನಗರದ ಕಾವೇರಿ ಹಾಲ್ ಜಾಗೃತಿ ಜಾಥ ನಡೆಯಿತು.