ಮಡಿಕೇರಿ ಜೂ.26 NEWS DESK : ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ರಾತ್ರಿ ವೇಳೆ ನಿರಂತರ ಮಳೆ ಸುರಿಯುತ್ತಿದ್ದು, ಕಾವೇರಿ ನದಿ ನೀರಿನ ಮಟ್ಟ ಏರಿಕೆಯಾಗಿದೆ. ಜೂನ್ ತಿಂಗಳ ಆರಂಭದಲ್ಲಿ ಕೈಕೊಟ್ಟ ಮಳೆ ಕೊನೆಯಲ್ಲಿ ಬಿರುಸು ಪಡೆದುಕೊಂಡಿದೆ. ಮಡಿಕೇರಿ ತಾಲ್ಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕಾವೇರಿಯ ಉಗಮ ಸ್ಥಾನ ತಲಕಾವೇರಿ ಮತ್ತು ಶ್ರೀಭಗಂಡೇಶ್ವರ ಕ್ಷೇತ್ರ ಭಾಗಮಂಡಲದಲ್ಲಿ ಉತ್ತಮ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮದಲ್ಲಿ ನದಿ ನೀರಿನ ಮಟ್ಟ ಏರಿಕೆಯಾಗಿದೆ. ತಲಕಾವೇರಿ ರಸ್ತೆಯಲ್ಲಿ ಮರ ಬಿದ್ದು ವಾಹನಗಳ ಸಂಚಾರಕ್ಕೆ ಅಡಚಣೆಯಾಗಿತ್ತು. ಇದೀಗ ಮರವನ್ನು ತೆರವುಗೊಳಿಸಲಾಗಿದೆ. ಮಡಿಕೇರಿ ನಗರ ವ್ಯಾಪ್ತಿಯಲ್ಲೂ ಮಳೆಯಾಗುತ್ತಿದ್ದು, ಮಂಜು ಮತ್ತು ಚಳಿ ಇದೆ. ನೀರುಕೊಲ್ಲಿ- ಚೆಟ್ಟಳ್ಳಿ ರಸ್ತೆಯಲ್ಲಿ ಮರ ಬಿದ್ದು, ವಾಹನ ಸಂಚಾರಕ್ಕೆ ತೊಡಕ್ಕುಂಟಾಗಿತ್ತು. ವಿರಾಜಪೇಟೆ, ಗೋಣಿಕೊಪ್ಪ, ಪೊನ್ನಂಪೇಟೆ, ಸೋಮವಾರಪೇಟೆ, ಕುಶಾಲನಗರ, ಸಿದ್ದಾಪುರ, ಕರಿಕೆ ಭಾಗದಲ್ಲೂ ಮಳೆಯಾಗುತ್ತಿದೆ. ಆರ್ದ್ರಾ ಮಳೆಯ ಆಗಮನ ಕೃಷಿಕರ ಮೊಗದಲ್ಲಿ ಮಂದಹಾಸ ಮೂಡಿಸಿದೆ.
ಕೊಡಗು ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡAತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 62.63 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 4.36 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 644.45 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 234.62 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 90.13 ಮಿ.ಮೀ. ಕಳೆದ ವರ್ಷ ಇದೇ ದಿನ 11.63 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 923.78 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 409.97 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 85.20 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 3.90 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 622.95 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 168.01 ಮಿ.ಮೀ. ಮಳೆಯಾಗಿತ್ತು.
ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 72.30 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 1.96 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 638.79 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 164.68 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 44.80 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 3.20 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 516.81 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 180.26 ಮಿ.ಮೀ. ಮಳೆಯಾಗಿತ್ತು. ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 20.70 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 1.10 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 519.90 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 250.20 ಮಿ.ಮೀ. ಮಳೆಯಾಗಿತ್ತು. ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 56.20, ನಾಪೋಕ್ಲು 85.20, ಸಂಪಾಜೆ 73.50, ಭಾಗಮಂಡಲ 145.60, ವಿರಾಜಪೇಟೆ 89.40, ಅಮ್ಮತ್ತಿ 81, ಹುದಿಕೇರಿ 66, ಶ್ರೀಮಂಗಲ 65, ಪೊನ್ನಂಪೇಟೆ 83.02, ಬಾಳೆಲೆ 75.16, ಸೋಮವಾರಪೇಟೆ ಕಸಬಾ 43.40, ಶನಿವಾರಸಂತೆ 28, ಶಾಂತಳ್ಳಿ 85, ಕೊಡ್ಲಿಪೇಟೆ 22.80, ಕುಶಾಲನಗರ 10.40, ಸುಂಟಿಕೊಪ್ಪ 31 ಮಿ.ಮೀ.ಮಳೆಯಾಗಿದೆ.
::: ಹಾರಂಗಿ ಜಲಾಶಯದ ನೀರಿನ ಮಟ್ಟ :::
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2830.62 ಅಡಿಗಳು. ಕಳೆದ ವರ್ಷ ಇದೇ ದಿನ 2819.74 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 7.80 ಮಿ.ಮೀ., ಇಂದಿನ ನೀರಿನ ಒಳಹರಿವು 810 ಕ್ಯುಸೆಕ್, ಕಳೆದ ವರ್ಷ ಇದೇ ದಿನ 230 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 200 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 30 ಕ್ಯುಸೆಕ್. ನಾಲೆಗೆ 20 ಕ್ಯುಸೆಕ್.