ಮಡಿಕೇರಿ ಜೂ.26 NEWS DESK : ನಾಡಪ್ರಭು, ಆದರ್ಶ ಆಡಳಿತಗಾರ ಕೆಂಪೇಗೌಡರ ಜಯಂತಿಯನ್ನು ಜೂ.27 ರಂದು ಸೋಮವಾರಪೇಟೆಯಲ್ಲಿ ಅರ್ಥಪೂರ್ಣವಾಗಿ ಆಡಚರಿಸಲು ಸೋಮವಾರಪೇಟೆ ತಾಲ್ಲೂಕು ಆಡಳಿತ ನಿರ್ಧರಿಸಿದೆ.
ತಹಶೀಲ್ದಾರ್ ನವೀನ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದು, ಜೂ.27 ರಂದು ಬೆಳಿಗ್ಗೆ 10 ಗಂಟೆಗೆ ಒಕ್ಕಲಿಗರ ಕಲ್ಯಾಣಮಂಟಪದಲ್ಲಿ ನಡೆಯಲಿದ್ದು, ಸಾಂಸ್ಕೃತಿಕ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ ನೆರವೇರಲಿದೆ.
ಈ ಸಂದರ್ಭ ಒಕ್ಕಲಿಗ ಮುಖಂಡರು ಹಾಜರಿದ್ದರು.